Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮ ಪಂಚಾಯಿತಿಯ ಚಿಕ್ಕಕಾಡಿಗಾನಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ (Dr. B. R. Ambedkar) ಹಾಗೂ ಬಾಬು ಜಗಜೀವನ್ ರಾಮ್ (Babu Jagjivan Ram) ಜಯಂತಿ ಆಚರಿಸಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಲಾಗಿತ್ತು.
ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ “ಚಿಕ್ಕಕಾಡಿಗಾನಹಳ್ಳಿಯಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಿರುವುದು ಶ್ಲಾಘನೀಯ. ಗ್ರಾಮಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ವಸತಿ ಯೋಜನೆಗಳಡಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ಮನೆ ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗುವುದು. ಯುವಕರು ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣದಿಂದ ವ್ಯಕ್ತಿವಿಕಸನದ ಜೊತೆಗೆ ಸಾಮಾಜಿಕ ವಿಕಸನ ಸಾಧ್ಯ ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಅಗಲಗುರ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ದಲಿತ ಸಮುದಾಯದ ಮುಖಂಡರು ಹಾಜರಿದ್ದರು.