Chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎನ್ಎಂ (ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನವೆಂಬರ್ 30ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://hfwcom.karnataka.gov.in ವೆಬ್‌ಸೈಟ್ ನೋಡಬಹುದು ಅಥವಾ ನಗರದ ಕಂದವಾರದಲ್ಲಿರುವ ಎಎನ್ಎಂ ತರಬೇತಿ ಕೇಂದ್ರ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಪ್ರಕಟಿಸಿದ್ದಾರೆ.