Chikkaballapur : Covid-19 ನೆಪದಲ್ಲಿ ‘ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ಹೂವು ಬೆಳೆಗಾರರಿಗೆ ಹೂವು ಮಾರಾಟಕ್ಕೆ ಅನುಮತಿ ನೀಡದೆ ಅಡ್ಡಿಪಡಿಸಲಾಗುತ್ತಿದೆ’ ಎಂದು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಚಿಕ್ಕಬಳ್ಳಾಪುರ ತಿರುಮಲ ಫ್ಲವರ್ ಸ್ಟಾಲ್ ಮಾಲೀಕ ಜಿ.ಎಂ.ಶ್ರೀಧರ ಹಾಗೂ ಕರಿಗನ ಪಾಳ್ಯದ ರಮೇಶ್ ರೆಡ್ಡಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್, ‘ಕೊರೊನಾ ಕಾರಣಕ್ಕಾಗಿ ಎರಡು ವರ್ಷಗಳಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು ಮಾರಾಟ ಗಾರರಿಗೆ ನಿರ್ಬಂಧ ಹೇರಲಾಗಿತ್ತು. ಈಗ ನಿರ್ಬಂಧ ಸಡಿಲಿಕೆಯಾಗಿದ್ದರೂ ಸ್ಥಳೀಯ ಶಾಸಕ (ಆರೋಗ್ಯ ಸಚಿವ) ಡಾ.ಕೆ.ಸುಧಾಕರ ಅವರ ರಾಜಕೀಯ ಒತ್ತಡದಿಂದಾಗಿ ಇನ್ನೂ ಮಾರಾಟಕ್ಕೆ ಅನುಮತಿ ನೀಡದೆ ಸತಾಯಿಸಲಾಗುತ್ತಿದೆ‘ ಎಂದು ಆಕ್ಷೇಪಿಸಿದರು.
‘APMC ಮಾರುಕಟ್ಟೆಯಲ್ಲಿ ಈಗಾಗಲೇ ತರಕಾರಿ ಮಾರಾಟಗಾರರಿಗೆ ಅನುವು ಮಾಡಿಕೊಡಲಾಗಿದ್ದು ಹೂವು ಬೆಳೆಗಾರರಿಗೆ ಮಾತ್ರ ರಾಜಕೀಯ ಕಾರಣಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡುತ್ತಿಲ್ಲ. ಆದ್ದರಿಂದ, ಕೂಡಲೇ ಹೂವು ಮಾರಾಟಗಾರರಿಗೂ ಅವಕಾಶ ನೀಡುವಂತೆ ನಿರ್ದೇಶಿಸಬೇಕು‘ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ಬಗ್ಗೆ ಸರ್ಕಾರಿ ವಕೀಲರು ವಿವರಣೆ ನೀಡುವಂತೆ ಸೂಚಿಸಿ ನ್ಯಾಯಪೀಠ ವಿಚಾರಣೆ ಯನ್ನು ಒಂದು ವಾರ ಮುಂದೂಡಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಎಪಿಎಂಸಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಎಪಿಎಂಸಿ ಕಾರ್ಯದರ್ಶಿ ಹಕೀಂ, ಜಿಲ್ಲಾಧಿಕಾರಿ ಹಾಗೂ ಎಸ್‌ಪಿಯನ್ನು ಪ್ರತಿವಾದಿಗಳನ್ನಾಗಿ ಮಾಡಿದೆ.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur