Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹಸಿರು ಕ್ರಾಂತಿಯ ಹರಿಕಾರ ಬಾಬುಜಗಜೀವನ್‌ರಾಂ (Babu Jagjivan Ram) ಅವರ ಜಯಂತಿಯನ್ನು (Birth Anniversary) ಸರವಾಗಿ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ, ಸಮಾಜಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ದೇಶದ 4ನೇ ಉಪಪ್ರಧಾನಿಯಾಗಿದ್ದ ಬಾಬುಜಗಜೀವನ್‌ರಾಂ ಅವರ ಜಯಂತಿಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಆಚರಿಸಲಾಯಿತು.
ಶಿಡ್ಲಘಟ್ಟ:

ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಗೌರಿಬಿದನೂರು :
ಗೌರಿಬಿದನೂರಿನ ಸಮಾನತಾ ಸೌಧದಲ್ಲಿ ತಹಶೀಲ್ದಾರ್ ಮಹೇಶ್ ಎಸ್.ಪತ್ರಿ ನೇತೃತ್ವದಲ್ಲಿ ಬಾಬು ಜಗಜೀವನ್ ರಾಂ ಜಯಂತಿ ಆಚರಿಸಲಾಯಿತು.
ಬಾಗೇಪಲ್ಲಿ:
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ 117ನೇ ಜನ್ಮದಿನಾಚರಣೆಯನ್ನು ತಹಶೀಲ್ದಾರ್ ಪ್ರಶಾಂತ್ ಕೆ.ಪಾಟೀಲ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು.