Chikkaballapur : 2022–23 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ (Karnataka Best Teacher Award) ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಶಿಕ್ಷಕರು ಭಾಜನರಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಗಿಮಾಕಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಎಚ್.ಎಲ್ ಚಂದ್ರಶೇಖರ್ ಅವರಿಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮತ್ತು ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯ ಸಂಗೀತ ಶಿಕ್ಷಕರಾದ ಕೀರ್ತಿ ಬಸಪ್ಪ ಲಗಳಿ ಅವರಿಗೆ ಪ್ರೌಢಶಾಲೆ ವಿಭಾಗದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
ಚಂದ್ರಶೇಖರ್ ಅವರು ಕಳೆದ 8 ವರ್ಷಗಳಿಂದ ರಾಗಿಮಾಕಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪ್ರಭಾರ ಮುಖ್ಯಶಿಕ್ಷಕರಾಗಿದ್ದಾರೆ.
ಸಂಗೀತ ಶಿಕ್ಷಕಿ ಕೀರ್ತಿ ಬಸಪ್ಪ ಲಗಳಿ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನವರಾಗಿದ್ದು, ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.