Chikkaballapur : ಬೈಕ್ ಕಳ್ಳತನಕ್ಕೆ ಯತ್ನಿಸಿ ಹಿಡಿಯಲು ಬಂದ ಗ್ರಾಮಸ್ಥರ ಮೇಲೆ ಕಳ್ಳರು ಗುಂಡಿನ ದಾಳಿ (Gun Firing) ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆ (Peresandra Police Station) ವ್ಯಾಪ್ತಿಯ ಮರವೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದಲ್ಲಿದ್ದ ಇಬ್ಬರು ಬೈಕ್ ಕಳ್ಳರನ್ನು ಹಿಡಿಯಲು ಗ್ರಾಮಸ್ಥರು ಮುಂದಾಗಿದ್ದು, ಆಗ ಕಳ್ಳರು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಗ್ರಾಮದ ನಿವಾಸಿ ಗಂಗಾಧರ್ ಅವರ ಹೊಟ್ಟೆಗೆ ಗುಂಡು ತಗುಲಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.