Home News Chikkaballapur ಹಿಡಿಯಲು ಬಂದ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ ಬೈಕ್ ಕಳ್ಳರು

ಹಿಡಿಯಲು ಬಂದ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ ಬೈಕ್ ಕಳ್ಳರು

0
Bike Theft firing Injury at Chikkaballapur Taluk Peresandra

Chikkaballapur : ಬೈಕ್ ಕಳ್ಳತನಕ್ಕೆ ಯತ್ನಿಸಿ ಹಿಡಿಯಲು ಬಂದ ಗ್ರಾಮಸ್ಥರ ಮೇಲೆ ಕಳ್ಳರು ಗುಂಡಿನ ದಾಳಿ (Gun Firing) ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆ (Peresandra Police Station) ವ್ಯಾಪ್ತಿಯ ಮರವೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದಲ್ಲಿದ್ದ ಇಬ್ಬರು ಬೈಕ್ ಕಳ್ಳರನ್ನು ಹಿಡಿಯಲು ಗ್ರಾಮಸ್ಥರು ಮುಂದಾಗಿದ್ದು, ಆಗ ಕಳ್ಳರು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗ್ರಾಮದ ನಿವಾಸಿ ಗಂಗಾಧರ್ ಅವರ ಹೊಟ್ಟೆಗೆ ಗುಂಡು ತಗುಲಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version