Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ BJP ನಗರ ಮತ್ತು ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ (BJP Executive Committee Meeting )ಸೋಮವಾರ ನಡೆಯಿತು.
ಕಾರ್ಯಕಾರಿಣಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಿದ್ಧಾಂತದ ಆಧಾರದ ಮೇಲೆ ಬಿಜೆಪಿ ಪಕ್ಷ ಬೆಳೆಯುತ್ತಿದೆ. ಚುನಾವಣೆಯ ಸಮಯದಲ್ಲಿ ಎಲ್ಲ ರಾಜಕೀಯ ಪಕ್ಷಗಳು ವಿವಿಧ ಕಾರ್ಯಕ್ರಮಗಳ ಅಡಿ ಪ್ರಚಾರ ಮಾಡುತ್ತವೆ. ಆದರೆ ಬಿಜೆಪಿ ರಾಷ್ಟ್ರೀಯತೆ, ಸನಾತನ ಧರ್ಮ, ದೇಶ…ಹೀಗೆ ತನ್ನದೇ ಆದ ತತ್ವಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ನಾವು ಯಾವ ರೀತಿಯಲ್ಲಿ ಮೂರು ತಿಂಗಳಲ್ಲಿ ಕಾರ್ಯಕ್ರಮ ಮಾಡಿದ್ದೇವೆ ಮತ್ತು ಮುಂದಿನ ಮೂರು ತಿಂಗಳಲ್ಲಿ ಯಾವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎನ್ನುವ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆಗಳು ನಡೆಯುತ್ತವೆ. ಅಟಲ್ (Atal Bihari Vajpayee) ರ ಕಾಲದಲ್ಲಿ ಅವರ ಮಹತ್ವಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ವಿಫಲರಾದರು. ಈಗ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ (Narendra Modi) ಅವರ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ಜನರಿಗೆ ತಲುಪಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರದ್ದಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್.ಕೃಷ್ಣಾರೆಡ್ಡಿ, ನಗರ ಮಂಡಲ ಅಧ್ಯಕ್ಷ ವಿ.ಶ್ರೀನಿವಾಸ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕಾಂತರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಿನಾರಾಯಣ ಗುಪ್ತ ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.