Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾ BJP ಪ್ರಕೋಷ್ಠ (Prakoshtha) ಗಳ ಸಮಾವೇಶ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K. Sudhakar) “ವಿಧಾನಸಭೆ ಚುನಾವಣೆಗೂ ಮುನ್ನ ಜಿಲ್ಲೆಯ ಗಡಿಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ಮುಖ್ಯಮಂತ್ರಿ (Basavaraj Bommai) ತಿಳಿಸಿದ್ದು ಮುಂದಿನ ಎರಡು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಮಗ್ರ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಉತ್ತರ ಕರ್ನಾಟಕದ ರೈತರಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಫಸಲ್ ಬಿಮಾ ಯೋಜನೆಯಡಿ (Pradhan Mantri Fasal Bima Yojana) ವಿಮೆ ಮಾಡಿಸಬೇಕು. ಪ್ರಕೋಷ್ಠ ಸದಸ್ಯರು ಪಕ್ಷದ ಪಿಲ್ಲರ್‌ಗಳಿದ್ದಂತೆ ಸರ್ಕಾರ ಮತ್ತು ಪಕ್ಷದ ನಡುವೆ ಕೊಂಡಿಯಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಪ್ರಕೋಷ್ಠಗಳು ಮಾಡುತ್ತವೆ. ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಸುಧಾರಿಸಬೇಕಾಗಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಹತ್ತಿರವಿದ್ದು ತಯಾರಿ ಮಾಡಿಕೊಳ್ಳಬೇಕು ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 3ರಿಂದ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬೇಕು. ಮೂರು ಜಿಲ್ಲೆಯ 15 ಕ್ಷೇತ್ರಗಳಲ್ಲಿ 8ರಿಂದ 9 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ (M. T. B. Nagaraj), ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ರಾಮಲಿಂಗಪ್ಪ, ಜೆಪಿ ವಿಭಾಗೀಯ ಕಾರ್ಯದರ್ಶಿ ಕಾಂತರಾಜ್, ಜಿಲ್ಲಾ ಪ್ರಭಾರಿ ಕೃಷ್ಣಾರೆಡ್ಡಿ, ವಾಣಿಜ್ಯ ಪ್ರಕೋಷ್ಠ ಪ್ರಕಾಶ್ ಮಂಡೋತ್, ಮಾವು ಮಾರುಕಟ್ಟೆ ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡ ಕೇಶವರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.