Home News Chikkaballapur ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ BJP ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ BJP ಪ್ರತಿಭಟನೆ

0

Chikkaballapur :ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹ 187 ಕೋಟಿ ಅನುದಾನ ದುರ್ಬಳಕೆಯಾಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪ್ರವೇಶ ದ್ವಾರದ ಗೇಟ್‌ಗಳನ್ನು ಬಂದ್ ಮಾಡಿದ ಪೊಲೀಸರು ಜಿಲ್ಲಾಡಳಿತ ಭವನದ ಆವರಣವನ್ನು ಪ್ರವೇಶಿಸಲು ಬಿಡಲಿಲ್ಲ. ಗೇಟ್ ಮುಂಭಾಗದಲ್ಲಿಯೇ ಕುಳಿತ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಕಾಂಗ್ರೆಸ್ ತೊಲಗಿಸಿ ದೇಶ ಉಳಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಎಸ್‌ಟಿ ನಿಗಮಕ್ಕೆ ಅನ್ಯಾಯ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗೂತ್ತಾ ಆಕ್ರೋಶ (BJP Protest) ವ್ಯಕ್ತಪಡಿಸಿದರು.

ಎಸ್‌ಟಿ ಸಮಾಜದ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹ 187 ಕೋಟಿಯನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಭ್ರಷ್ಟಾಚಾರ ನಡೆಸಿದೆ. ರಾಜ್ಯ ಬೊಕ್ಕಸ ಬರಿದು ಮಾಡಿ ಜನಸಾಮಾನ್ಯರ ಮೇಲೆ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯಲಾಗುತ್ತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ್, ಮಧುಸೂದನ್ ರೆಡ್ಡಿ, ಗ್ರಾಮಾಂತ ಮಂಡಲ ಅಧ್ಯಕ್ಷ ಸಂತೋಷ್, ನಗರ ಮಂಡಲ ಅಧ್ಯಕ್ಷ ಆನಂದ್, ಹಾಲು ಪ್ರಕೋಷ್ಠ ಸಂಚಾಲಕ ನಾರಾಯಣಪ್ಪ, ಆರ್‌.ಎನ್‌.ಎಚ್ ಅಶೋಕ್, ಸೊಪ್ಪಳ್ಳಿ ರಾಮಕೃಷ್ಣ, ನರೇಶ್, ದೇವಸ್ಥಾನ ಹೊಸಹಳ್ಳಿ ರಾಮಣ್ಣ, ಮಲ್ಲಿಕಾ, ಸೌಮ್ಯ, ಮಧುಚಂದ್ರ, ವೇಣುಗೋಪಾಲ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೋಲಾರ :

Kolar BJP Protest

ಕೋಲಾರದ ಜಿಲ್ಲಾಡಳಿತ ಕಚೇರಿ ಮುಂದೆ ಶುಕ್ರವಾರ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version