Chikkaballapur District : ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಯೇಸು ಕ್ರಿಸ್ತನ ಜನ್ಮದಿನವಾದ ಕ್ರಿಸ್‌ಮಸ್‌ನ ಆಚರಣೆಯನ್ನು (Christmas Celebration) ಕ್ರಿಶ್ಚಿಯನ್ ಸಮುದಾಯದವರು ಸಡಗರದಿಂದ ಚರ್ಚ್‌ಗಳಲ್ಲಿ ಕ್ಯಾರಲ್ಸ್ ಹಾಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿ ಆಚರಿಸಿದರು.
ಕ್ಯಾಥೋಲಿಕ ಪಂಥದವರು ಚಿಕ್ಕಬಳ್ಳಾಪುರ ನಗರದ ಬಿ.ಬಿ.ರಸ್ತೆಯಲ್ಲಿರುವ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನಲ್ಲಿ (St. Francis Xavier’s Church) ಮತ್ತು ಸಿಎಸ್‌ಐ ಚರ್ಚ್‌ನಲ್ಲಿ (CSI Church) ಪ್ರಾಟೆಸ್ಟೆಂಟ್ ಪಂಥದವರು ಕ್ರಿಸ್‌ಮಸ್ ಹಬ್ಬವನ್ನು ಆಚರಿಸಿದರು.
ಶಿಡ್ಲಘಟ್ಟ
ಕ್ರಿಸ್‌ಮಸ್ ಪ್ರಯುಕ್ತ ಶನಿವಾರ ಶಿಡ್ಲಘಟ್ಟ ನಗರದ ಚಿಂತಾಮಣಿ ರಸ್ತೆಯ ಸೆಕ್ರೇಡ್ ಹಾರ್ಟ್ ಚರ್ಚ್, ದಿಬ್ಬೂರಹಳ್ಳಿ ರಸ್ತೆಯ ಎಬೆನೆಜರ್ ಮಾರ್ತೋಮ ಚರ್ಚ್, ನೆಲ್ಲೀಮರದಹಳ್ಳಿಯ ಇಮ್ಮಾನುವೇಲ್ ಚರ್ಚ್ ಹಾಗೂ ತಾಲ್ಲೂಕಿನ ವಿವಿಧೆಡೆಯ ಚರ್ಚ್‌ಗಳನ್ನು ಬಣ್ಣಬಣ್ಣದ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಮೇಣದ ಬತ್ತಿಗಳನ್ನು ಬೆಳಗುವ ಮೂಲಕ ಕ್ರಿಶ್ಚಿಯನ್ ಸಮುದಾಯದವರು ಹಾಗೂ ಶಿಡ್ಲಘಟ್ಟ ನಾಗರಿಕರು ಯೇಸು ಕ್ರೈಸ್ತರಿಗೆ ಪ್ರಾರ್ಥನೆ ಸಲ್ಲಿಸಿದ್ದರು.
ಚೇಳೂರು:
ಶನಿವಾರ ಕ್ರೈಸ್ತರು ಚೇಳೂರಿನ ಬೇಥಲ್ ಚರ್ಚ್‌ನಲ್ಲಿ ಕ್ರಿಸ್‍ಮಸ್ ಹಬ್ಬವನ್ನುಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur