Chikkaballapur : ಅಖಿಲ ಭಾರತ ಮಟ್ಟದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದ (Strike) ಪ್ರಯುಕ್ತ ಮಂಗಳವಾರ ಚಿಕ್ಕಬಳ್ಳಾಪುರ ನಗರದಲ್ಲಿ CITU ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡು ಬಿ.ಬಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ (Protest) ನಡೆಸಿದರು.
ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ನಿಯಂತ್ರಿಸಿ ಪೆಟ್ರೋಲಿಯಂ ವಸ್ತುಗಳ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡಬೇಕು. ರೈತ ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಿ ಅಂಗನವಾಡಿ, ಆಶಾ, ಬಿಸಿಯೂಟ ಹಾಗೂ ಇತರೆ ಯೋಜನೆಗಳ ನೌಕರರಿಗೆ ಶಾಸನಬದ್ಧ ವೇತನ ಹಾಗೂ ಸಾಮಾಜಿಕ ಭದ್ರತೆ ಜಾರಿಗೊಳಿಸಬೇಕು. ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ, ಸಿಐಟಿಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಖಜಾಂಚಿ ವೆಂಕಟಲಕ್ಷ್ಮಮ್ಮ, ಕೆ. ರತ್ನಮ್ಮ, ಎಚ್.ಪಿ. ಲಕ್ಷ್ಮಿನಾರಾಯಣ, ಮುನಿಕೃಷ್ಣಮ್ಮ, ನರಸಮ್ಮ, ರಾಜಮ್ಮ, ವಿ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur