Chikkaballapur : ಜನವರಿ 3 ರಿಂದ ಪ್ರಾರಂಭವಾದ 15 ರಿಂದ 18 ರ ವಯೋಮಾನದ ಮಕ್ಕಳಿಗೆ ಲಸಿಕೆ (Covid-19 Vaccination) ನೀಡುವ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಶುಕ್ರವಾರದ ವರೆಗೆ (January 07, 2022) 60% ರಷ್ಟು ಲಸಿಕೆ ನೀಡುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದೆ.
“15 ರಿಂದ 18 ರ ವಯೋಮಾನದ ಮಕ್ಕಳಿಗೆ ಜಿಲ್ಲೆಯಲ್ಲಿ ಶೇಕಡಾ 60 ರಷ್ಟು ಲಸಿಕೆ ನೀಡುವ ಮೂಲಕ, ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.” ಎಂದು ಜಿಲ್ಲಾಧಿಕಾರಿ ಆರ್. ಲತಾ (Deputy Commissioner R. Latha) ತಿಳಿಸಿದ್ದಾರೆ.
ಜಿಲ್ಲಾಡಳಿತದಿಂದ ಇದಕ್ಕಾಗಿ ಲಸಿಕಾ ಮೇಳವನ್ನು ಏರ್ಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಲಸಿಕೆಯನ್ನು ನೀಡುವ ಕಾರ್ಯವನ್ನು ಕೈಗೊಳ್ಳಲಾಗಿತ್ತು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur