Chikkaballapur : ಜಿಲ್ಲೆಯಲ್ಲಿ 85 ಸಾವಿರಜನ 2 ನೇ ಡೋಸ್ Covid-19 Vaccine ಲಸಿಕೆ ಪಡೆಯಲು ಬಾಕಿ ಇದ್ದು ಅವರಿಗೆ ಜ.11 ರಂದು ಜಿಲ್ಲೆಯ ನಗರ ಪ್ರದೇಶ ಸೇರಿದಂತೆ 157 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ತಿಳಿಸಿದ್ದಾರೆ. ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯದವರು ಬಂದು ಕೋವಿಡ್ ಲಸಿಕೆ ಪಡೆದು ಕರೋನ ತಡೆಗಟ್ಟಲು ಸಹಕರಿಸಬೇಂದು ಜಿಲ್ಲಾಧಿಕಾರಿಗಳು ಕೋರಿದರು.
ಸರ್ಕಾರದ ಆದೇಶದಂತೆ ಜ.10 ರಿಂದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ Covid-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿಯೂ ಹಮ್ಮಿಕೊಳ್ಳಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಚಾಲನೆ ದೊರೆಯಲಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ 8,300 ಜನರು ಮುನ್ನೆಚ್ಚರಿಕೆ ಡೋಸ್ (Precautionary/Booster Dose) ಲಸಿಕೆ ಪಡೆಯಲು ಅರ್ಹರಾಗಿದ್ದು ಲಸಿಕಾ ಕೇಂದ್ರಗಳಿಗೆ ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur