Chikkaballapur : ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆ (M.G. Road), ಬಿ.ಬಿ. ರಸ್ತೆ (BB Road), APMC ಗೆ ಪೌರಾಯುಕ್ತ ಮಹಾಂತೇಶ್, ಅಧಿಕಾರಿಗಳು ಹಾಗೂ ಮಾರ್ಷಲ್‌ಗಳ ಜತೆ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು ಭೇಟಿ ನೀಡಿ ಮಾಸ್ಕ್ ಧರಿಸದವರಿಗೆ Mask ನೀಡಿ ಜನರಲ್ಲಿ ಕೋವಿಡ್ ಕುರಿತು ಜಾಗೃತಿ (Covid-19 Awareness) ಮೂಡಿಸಿದರು.
ನಗರಸಭೆ ಕೋವಿಡ್ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೋವಿಡ್ ನಿಯಂತ್ರಣಕ್ಕೆ ನಾಗರಿಕರು ಸಹಕರಿಸಬೇಕು. ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಕೋವಿಡ್ ನಿಯಮಗಳ ಜಾರಿಯ ಬಗ್ಗೆ ನಗರಸಭೆಯು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು ನಿಯಮಗಳನ್ನು ಉಲಂಘಿಸಿದ್ದರೆ ದಂಡವನ್ನು ವಿಧಿಸಬೇಕಾಗುತ್ತದೆ ಎಂದು ಡಿ.ಎಸ್.ಆನಂದರೆಡ್ಡಿ ಬಾಬು ಹೇಳಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur