Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು ಹೋಬಳಿಯ (Mandikal Hobli) ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಬೊಮ್ಮಗಾನಹಳ್ಳಿ (Bommaganahalli) ಗ್ರಾಮದಲ್ಲಿ ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಜೂನ್ 18 ರಂದು ಜಿಲ್ಲಾಧಿಕಾರಿ ಆರ್.ಲತಾ (Deputy Commissioner R Latha) ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಂಗವಾಗಿ ಗೌರಿಬಿದನೂರು (Gauribidanur)ತಾಲ್ಲೂಕಿನ ಗುಂಡ್ಲಹಳ್ಳಿ, ಚಿಂತಾಮಣಿ (Chintamani) ತಾಲ್ಲೂಕಿನ ಹೊಸಹಳ್ಳಿ, ಶಿಡ್ಲಘಟ್ಟ (Sidlaghatta) ತಾಲ್ಲೂಕಿನ ಹಾರಡಿ ಗ್ರಾಮ, ಗುಡಿಬಂಡೆ (Gudibande) ತಾಲ್ಲೂಕಿನ ಉಲ್ಲೋಡು ಗ್ರಾಮ, ಬಾಗೇಪಲ್ಲಿ (Bagepalli) ತಾಲ್ಲೂಕಿನ – ಕಾನಗಮಾಕಪಲ್ಲಿ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರರು,ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿಕೊಡುವರು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ತಿಳಿಸಿದ್ದಾರೆ.