ಚಿಕ್ಕಬಳ್ಳಾಪುರ: ಹಿರಿಯ ನಾಗರಿಕರ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Quick facts: Chikkaballapur DC G. Prabhu has directed officials to promptly resolve senior citizens’ grievances, alongside a district-level Senior Citizens’ Day sports and cultural event with ID cards distributed to elders.
ಜಿಲ್ಲಾಧಿಕಾರಿಗಳ ಸೂಚನೆ ಏನಿತ್ತು?
ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿರಿಯ ನಾಗರಿಕರನ್ನು ಅವರ ಮಕ್ಕಳು, ಅಳಿಯ, ಸೊಸೆ ಅಥವಾ ಕುಟುಂಬದ ಇತರ ಸದಸ್ಯರು ಗೌರವಯುತವಾಗಿ ಪಾಲನೆ-ಪೋಷಣೆ ಮಾಡಬೇಕು ಎಂದು ಮನವಿ ಮಾಡಿದ ಅವರು, ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕಾನೂನಿನಡಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪಾಲನೆ-ಪೋಷಣೆ ಹಾಗೂ ಆಸ್ತಿ ಹಕ್ಕಿನ ಬಗ್ಗೆ ಏನು ಹೇಳಿದರು?
ಪಾಲನೆ-ಪೋಷಣೆಗೆ ಸಂಬಂಧಿಸಿದಂತೆ ಮಕ್ಕಳ ಅಥವಾ ಸಂಬಂಧಪಟ್ಟವರ ಸಂಬಳ ಅಥವಾ ಇತರ ಆದಾಯ ಮೂಲದಿಂದ ಹಣ ಕಡಿತಗೊಳಿಸುವುದು, ಆಸ್ತಿ ದಾಖಲೆಗಳಲ್ಲಿ ಬಾಕಿ ನಮೂದಿಸುವುದು ಸೇರಿದಂತೆ ಕಾನೂನಿನಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಹಿರಿಯ ನಾಗರಿಕರು ತಮ್ಮ ಆಸ್ತಿಯನ್ನು ವಾಪಸ್ಸು ಪಡೆಯಲು ಇರುವ ಕಾನೂನು ಅವಕಾಶಗಳ ಬಗ್ಗೆಯೂ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸಮಸ್ಯೆಗಳಿಗೆ ಉಪವಿಭಾಗಾಧಿಕಾರಿ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿದ್ದು, ಈ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದೂ ಅವರು ಸೂಚಿಸಿದರು.
ಕುಂದುಕೊರತೆ ಸಭೆ ಹಾಗೂ ಉಚಿತ ಕಾನೂನು ನೆರವು ಹೇಗೆ ಸಿಗುತ್ತದೆ?
ಜಿಲ್ಲೆಯಲ್ಲಿ ಎರಡು ತಿಂಗಳಿಗೊಮ್ಮೆಯಂತೆ ನಿರಂತರವಾಗಿ ಹಿರಿಯ ನಾಗರಿಕರ ಕುಂದುಕೊರತೆಗಳ ಸಭೆಗಳನ್ನು ಆಯೋಜಿಸಿ ಸಮಸ್ಯೆಗಳ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರುವವರು ಉಚಿತ ಕಾನೂನು ನೆರವು ಪಡೆಯಬಹುದಾಗಿದೆ. ಸಮಸ್ಯೆ ಎದುರಾದಲ್ಲಿ ಅನಧಿಕೃತ ವ್ಯಕ್ತಿಗಳ ಮೊರೆ ಹೋಗದೆ ಕಾನೂನು ಸೇವಾ ಸಂಸ್ಥೆಗಳ ಮೂಲಕವೇ ಪರಿಹಾರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಪ್ರೇಮಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚೇತನ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜ್ಯೋತಿಲಕ್ಷ್ಮೀ ಸೇರಿದಂತೆ ಅಧಿಕಾರಿಗಳು, ವಕೀಲರು ಹಾಗೂ ನೂರಾರು ಹಿರಿಯ ನಾಗರಿಕರು ಉಪಸ್ಥಿತರಿದ್ದರು.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)
Stay tuned for more local updates.
