Chikkaballapur : ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯ (BB Road) ಸರ್ಕಾರಿ ಪ್ರೌಢಶಾಲೆಗೆ (Government High School) ಜಿಲ್ಲಾಧಿಕಾರಿ ಆರ್. ಲತಾ (Deputy Commissioner R. Latha) ಮಂಗಳವಾರ ಭೇಟಿ ನೀಡಿ SSLC ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆ ಕುರಿತು ಸಂವಾದ ನಡೆಸಿದರು.
2019-20 ಮತ್ತು 2020-21ನೇ ಸಾಲಿನ SSLC ಫಲಿತಾಂಶದ ವಿಚಾರದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಗಮನ ಸೆಳೆದಿದ್ದು ಈ ಸಾಧನೆಯನ್ನು 2021-22ನೇ ಸಾಲಿನಲ್ಲಿಯೂ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಅಭ್ಯಾಸ ಮಾಡಬೇಕು. ಈಗಾಗಲೇ ಶಿಕ್ಷಕರು ಪಠ್ಯಕ್ರಮವನ್ನು ಪೂರ್ಣಗೊಳಿಸಿದ್ದು ಪಠ್ಯಕ್ಕೆ ಸಂಬಂಧಿಸಿದಂತೆ ಪುನರ್ಮನನ ಮಾಡಿಕೊಂಡು ಅರ್ಥವಾಗದ ವಿಷಯಗಳ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿ ಎಲ್ಲಾ ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಅಂಕಗಳನ್ನು ಪಡೆಯಲು ಶ್ರಮಿಸಬೇಕು. ಯೋಜಿತ ರೀತಿಯಲ್ಲಿ ಶಿಕ್ಷಕರ ಮಾರ್ಗದರ್ಶನ ಪಡೆದು ಅಭ್ಯಾಸ ಮಾಡಿದರೆ, ಯಶಸ್ಸುಗಳಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮರೆಡ್ಡಿ, ಶಿಕ್ಷಕರು ಸಂವಾದದಲ್ಲಿ ಉಪಸ್ಥಿತರಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur