Chikkaballapur : ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಸೆ.29 ಬುಧವಾರ ದಂದು ವಿಶೇಷ covid ಲಸಿಕಾ ಮೇಳವನ್ನು (Mega Covid-19 Vaccination Drive/Mela) ಆಯೋಜಿಸಲಾಗಿದ್ದು, ಈ ಮೂಲಕ ಒಂದು ದಿನದಲ್ಲಿ 40 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 11,43,923 ಡೋಸ್ ಕಾವಿಡ್ ಲಸಿಕೆಯನ್ನು ನೀಡಲಾಗಿದ್ದು, ಇದರಲ್ಲಿ 7,89,527 ಮೊದಲ ಡೋಸ್ ಮತ್ತು 3,54,356 ಎರಡನೆಯ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ನಿರಂತರವಾಗಿ covid ಲಸಿಕೆ ನೀಡಲಾಗುತ್ತಿದ್ದು, ವಿಶೇಷ ಲಸಿಕಾ ಮೇಳ ಮತ್ತು ಉತ್ಸವಗಳನ್ನು ಆಯೋಜಿಸುವ ಮೂಲಕ ಹೆಚ್ಚಿನ ಜನರಿಗೆ ಲಸಿಕೆಯನ್ನು ನೀಡುವ ಗುರಿಯನ್ನು ಸಾಧಿಸಲಾಗುತ್ತಿದೆ. ಅದರಂತೆ ವಾರದಲ್ಲಿ ಪ್ರತಿ ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯ ೨೦೦ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳಲ್ಲಿ ೪೦ ಸವಿಯಕ್ಕೂ ಹೆಚ್ಚು ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ಮೊದಲನೆಯ ಡೋಸ್ ಪಡೆದು ಎರಡನೆಯ ಡೋಸ್ ಪಡೆಯಲು ಅರ್ಹರಿರುವ ಸಾರ್ವಜನಿಕರು ಬುಧವಾರ ಸಮೀಪದ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಎರಡನೆಯ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
File Image
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur