Friday, March 29, 2024
HomeChikkaballapurBooster Dose ಲಸಿಕೆ ಅಭಿಯಾನಕ್ಕೆ ಚಾಲನೆ

Booster Dose ಲಸಿಕೆ ಅಭಿಯಾನಕ್ಕೆ ಚಾಲನೆ

- Advertisement -
- Advertisement -
- Advertisement -
- Advertisement -

Chikkaballapur District : ಸೋಮವಾರದಿಂದ Coronavirus ತಡೆಗಟ್ಟುವ ಸಲ್ಲುವಾಗಿ ಮುಂಚೂಣಿ ಕಾರ್ಯಕರ್ತರು ಹಾಗೂ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಹಾಗೂ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ Booster Dose Covid-19 Vaccine ಲಸಿಕೆ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಚಾಲನೆ ದೊರೆಯಿತು.

ಚಿಕ್ಕಬಳ್ಳಾಪುರ

Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ ” 2ನೇ ಡೋಸ್ ಪಡೆದ 9 ತಿಂಗಳ ನಂತರ ಕೋವಿಡ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ (Precautionary Dose) ತೆಗೆದುಕೊಳ್ಳಲು ಪ್ರಸ್ತುತ ಜಿಲ್ಲೆಯಲ್ಲಿ 8,550 ಜನ ಅರ್ಹರಾಗಿದ್ದು ಇವರೆಲ್ಲರೂ ಸಹ ಲಸಿಕಾ ಕೇಂದ್ರಗಳಿಗೆ ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಹಾಕಿಸಿಕೊಳ್ಳಬೇಕು. ಜಿಲ್ಲೆಯು ಬೆಂಗಳೂರಿಗೆ ಸಮೀಪವಿರುವುದರಿಂದ ದಿನೇದಿನೇ ಕರೋನ ಪ್ರಕರಣಗಳು ಹೆಚ್ಚುತ್ತಿದ್ದು ನಿತ್ಯ ರಾಜಧಾನಿಗೆ ಹೋಗಿ ಬರುವವರ ಮೇಲೆ ನಿಗಾವಹಿಸಿದ್ದೇವೆ. ಪ್ರತಿ ದಿನ 3,000ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು ನಗರ ಪ್ರದೇಶ ಸೇರಿದಂತೆ ಪ್ರತಿ ವಾರ್ಡ್, ಗ್ರಾಮಗಳಲ್ಲಿ ಕೋವಿಡ್ ನಿಯಂತ್ರಣ ಟಾಸ್ಕ್ ಪೋರ್ಸ್ ಕಾರ್ಯಚಟುವಟಿಕೆಗಳನ್ನು ಮತ್ತಷ್ಟುತೀವ್ರಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದರು .

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರುದ್ರಮೂರ್ತಿ, ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಶಿಡ್ಲಘಟ್ಟ

Sidlaghatta Covid-19 Booster Dose Vaccine Mela

Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ Covd-19 ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಶಾಸಕ ವಿ.ಮುನಿಯಪ್ಪ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಬಿ.ಎಸ್.ರಾಜೀವ್ ” 1420 ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಈ ದಿನ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕೆ ನೀಡುತ್ತಿದ್ದು ಅದರೊಂದಿಗೆ 11 ಸಾವಿರ ಮಂದಿ ಎರಡನೇ ಡೋಸ್ ಲಸಿಕೆ ಪಡೆಯದಿರುವವರಿಗೂ ಲಸಿಕೆ ಹಾಕುತ್ತಿದ್ದೇವೆ ” ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಆಸ್ಪತ್ರೆ ಸಿಬಂಧಿ ಉಪಸ್ಥಿತರಿದ್ದರು.

ಚಿಂತಾಮಣಿ

Chintamani Covid-19 Booster Dose Vaccine Mela

Chintamani : ಚಿಂತಾಮಣಿನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಆರೋಗ್ಯ ಕಾರ್ಯಕರ್ತರು ಮತ್ತು ಕೊರೊನಾ ತಡೆಗಟ್ಟಲು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವವರಿಗೆ ಬೂಸ್ಟರ್ ಡೋಸ್ ನೀಡುವುದಕ್ಕೆ ಶಾಸಕ ಎಂ.ಕೃಷ್ಣಾರೆಡ್ಡಿ ಚಾಲನೆ ನೀಡಿದರು.

ಶಾಸಕ ಎಂ.ಕೃಷ್ಣಾರೆಡ್ಡಿ ಮಾತನಾಡಿ “ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದ್ದು ಮೂರನೇ ಅಲೆ ಬಹಳ ವೇಗವಾಗಿ ಹರಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಕಹಿ ಪ್ರಸಂಗಗಳಿಂದ ಪಾಠ ಕಲಿತಿರುವ ಸರ್ಕಾರ ಹಲವಾರು ಕ್ರಮಗಳನ್ನು ಮುಂಜಾಗ್ರತೆಯಾಗಿ ಕೈಗೊಳ್ಳುತ್ತಿದ್ದು ಸಾರ್ವಜನಿಕರು ಸಹಕರಿಸಬೇಕು” ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ನಗರಸಭೆ ಅಧ್ಯಕ್ಷೆ ರೇಖಾಉಮೇಶ್, ತಹಶೀಲ್ದಾರ್ ಹನುಮಂತರಾಯಪ್ಪ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ್, ನಗರಸಭೆ ಸದಸ್ಯರಾದ ಮಂಜುನಾಥ್, ದೇವಳಂ ಶಂಕರ್, ಜೈಬೀಮ್ ಮುರಳಿ, ಮಹ್ಮದ್ ಗೌಸ್, ಚಾಂದ್ ಪಾಷಾ ಮತಿತ್ತರರು ಉಪಸ್ಥಿತರಿದ್ದರು.

ಗುಡಿಬಂಡೆ

Gudibande : ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ನರಸಿಂಹಮೂರ್ತಿ “ಕೊರೊನ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ, ಪೊಲೀಸ್, ಪೌರಕಾರ್ಮಿಕ, ಮಾಧ್ಯಮ ಹಾಗೂ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮೂರನೆಯ ಬೂಸ್ಟರ್ ಡೋಸ್ ಕರೋನ ಲಸಿಕೆ ನೀಡಲಾಗುತ್ತಿದ್ದು 2ನೇ ಡೋಸ್ ಪಡೆದು ಒಂಬತ್ತು ತಿಂಗಳಾಗಿರುವ 60 ವರ್ಷ ಮೇಲ್ಪಟ್ಟ ನಾಗರಿಕರು ಈ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ. ಕೋವಿಡ್ ಕುರಿತು ಯಾರೂ ಆತಂಕ ಪಡದೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು” ಹೇಳಿದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!