Chikkaballapur : ಸರ್ಕಾರದ ಸೇವೆಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಸೇವಾ ಸಿಂಧು ಯೋಜನೆಯಡಿ ‘Grama One’ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಲಾಗಿದ್ದು ವಾರದ ಏಳೂ ದಿನಗಳು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೂ ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ (Deputy Commissioner R Latha) ತಿಳಿಸಿದರು.
ಯೋಜನೆ ಅಡಿಯಲ್ಲಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು ಕೊರತೆ ನಿವಾರಣೆ ಕೋರಿ ಅರ್ಜಿ ಸೇರಿದಂತೆ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಸ್ಥಾಪಿಸಿ ಯಶಸ್ಸು ಸಾಧಿಸಲಾಗಿದ್ದು ಈಗ ಎಲ್ಲ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಒನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಜನಸಂಖ್ಯೆ ಅನುಗುಣವಾಗಿ ಜಿಲ್ಲೆಯ ಎಲ್ಲಾ 157 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಅಥವಾ ಎರಡು ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದ್ದು ಆಸಕ್ತ ಅಭ್ಯರ್ಥಿಗಳು https://karnatakaone.gov.in ಅಥವಾ https://sevasindhu.karnataka.gov.in/ ಜಾಲತಾಣಕ್ಕೆ ಭೇಟಿ ಮಾಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಜನವರಿ 27 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ: 7829274377, 9743669741, 9686579224 ಅಥವಾ ಇ–ಮೇಲ್ onehelpdesk@karnataka.gov.in ಅಥವಾ ಪೂರ್ಣ ಚಂದ್ರ 9900285258, ಜಿಲ್ಲಾ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು.