Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಹೆಚ್ಚಾಗಿದ್ದು, ಕಳೆದ ಒಂದು ವಾರದಿಂದ ಪೊಲೀಸರು ಈ ಬೆಟ್ಟಿಂಗ್ ದಂಧೆಯ ಮೇಲೆ ತೀವ್ರ ನಿಗಾ ಇಡಲಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಇಲ್ಲಿಯವರೆಗೆ IPL ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದಾಖಲಾದ ಬೆಟ್ಟಿಂಗ್ ಪ್ರಕರಣಗಳು
- ಚಿಕ್ಕಬಳ್ಳಾಪುರ ನಗರ ಠಾಣೆ – 2
- ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ – 5
- ಬಾಗೇಪಲ್ಲಿ ಪೊಲೀಸ್ ಠಾಣೆ – 13
- ಮಂಚೇನಹಳ್ಳಿ – 3
- ಚಿಂತಾಮಣಿ ನಗರ ಠಾಣೆ – 2
- ಚಿಂತಾಮಣಿ ಗ್ರಾಮಾಂತರ – 4
- ನಂದಿಗಿರಿಧಾಮ – 2
- ಗೌರಿಬಿದನೂರು ಗ್ರಾಮಾಂತರ ಠಾಣೆ – 2
- ಪೆರೇಸಂದ್ರ – 1
- ಶಿಡ್ಲಘಟ್ಟ – 1 ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಬಹಳಷ್ಟು ಕಿಂಗ್‌ಪಿನ್‌ಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ ಹಾಗೂ ಕಳೆದ ವರ್ಷ ಕ್ರಿಕೆಟ್ ಬೆಟ್ಟಿಂಗ್ ನಿಂದ ಬಂಧನಕ್ಕೆ ಒಳಗಾದವರನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಗಮನಕ್ಕೆ ಯಾರಾದರೂ ಬೆಟ್ಟಿಂಗ್ ದಂಡೆಯಲ್ಲಿ ತೊಡಗಿರುವುದು ಕಂಡುಬಂದರೆ ಅವರು ಕಂಟ್ರೋಲ್ ರೂಂ ಅಥವಾ ಸಮೀಪದ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.