Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ‘ನಾಡಪ್ರಭು ಕೆಂಪೇಗೌಡರ ಜಯಂತಿ’ (Kempegowda Jayanthi) ಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ” ಕೆಂಪೇಗೌಡರ ಆದರ್ಶದ ವಿಚಾರ ಗಳನ್ನು, ಕೊಡುಗೆಗಳನ್ನು ಹಾಗೂ ಶಿಸ್ತಿನ ಜೀವನವನ್ನು ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಜಯಂತಿಯ ದಿನ ಶಿಕ್ಷಕರು ತಿಳಿಸಿಕೊಟ್ಟರೆ ಈ ದಿನಾಚರಣೆ ಅರ್ಥಪೂರ್ಣ ಆಗುತ್ತದೆ” ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಯಲುವಹಳ್ಳಿ ಎನ್.ರಮೇಶ್, ಕೋನಪ್ಪರೆಡ್ಡಿ, ಹೆಚ್ಚುವರಿ ಜಿಲ್ಲಾಧಿ ಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ರಮೇಶ್, ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ಜಿ.ಪಂ. ಉಪಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಹರೀಶ್, ಮುಖಂಡರಾದ ಶ್ರೀನಿವಾಸ್, ಡಾ. ಶ್ರೀನಿವಾಸ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಶಿಡ್ಲಘಟ್ಟ
ಶಿಡ್ಲಘಟ್ಟ ತಾಲ್ಲೂಕು ಕೆಂಪೇಗೌಡರ ಜಯಂತ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಮೈದಾನದಲ್ಲಿ ಮಂಗಳವಾರ ನಾಡಪ್ರಭು ಕೆಂಪೇಗೌಡರ 514ನೇ ವರ್ಷದ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಾಲಾಗಿತ್ತು.
ಚಿಂತಾಮಣಿ
ಚಿಂತಾಮಣಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಪ್ರಯುಕ್ತ ಸುಮಾರು 70 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಯಿತು.
ಗುಡಿಬಂಡೆ
ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಕೆಂಪೇಗೌಡ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಗೌರಿಬಿದನೂರು
ಗೌರಿಬಿದನೂರು ನಗರದ ಡಾ.ಎಚ್.ಎನ್ ಕಲಾಮಂದಿರದಲ್ಲಿ ಮಂಗಳವಾರ ಕೆಂಪೇಗೌಡ ಸಾಂಸ್ಕೃತಿಕ ವೇದಿಕೆ ಹಾಗೂ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆಯ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡ ಅವರ 514ನೇ ಜಯಂತೋತ್ಸವವನ್ನು ಆಚರಿಸಲಾಯಿತು.
ಬಾಗೇಪಲ್ಲಿ
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟಿಸಿದರು.