Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕುವೆಂಪು ಜಯಂತಿ (Kuvempu Jayanthi) ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ “ಕುವೆಂಪು ಅವರ ಕಾದಂಬರಿಗಳು, ನಾಟಕಗಳನ್ನು ಯುವ ಸಮುದಾಯ ಹೆಚ್ಚು ಅಧ್ಯಯನ ಮಾಡುವ ಮೂಲಕ ವಿಶ್ವ ಮಾನವ ದೃಷ್ಟಿಕೋನ ಬೆಳೆಸಿಕೊಳ್ಳಬೇಕು. ಶಿಕ್ಷಕರು ಕುವೆಂಪು ಅವರ ಸಾಹಿತ್ಯ ಕೃತಿಗಳ ಬಗ್ಗೆ ಮಕ್ಕಳಿಗೆ ತಿಳಿಸಿ ಅವರ ವಿಚಾರಗಳ ಅರಿವನ್ನು ಮೂಡಿಸಬೇಕು. ಕೃತಿಗಳ ಅಧ್ಯಯನದಿಂದ ಭಾಷಾ ಪ್ರೌಢಿಮೆ ಮತ್ತು ಸಾಹಿತ್ಯದಲ್ಲಿ ಹಿಡಿತ ಹೆಚ್ಚುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ, ನಗರಸಭೆ ಅಧ್ಯಕ್ಷ ಆನಂದರೆಡ್ಡಿಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಡಿವೈಎಸ್‌ಪಿ ವಾಸುದೇವ್ ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ನಡೆದ ಕುವೆಂಪು ಅವರ 117ನೇ ಜಯಂತಿಯನ್ನು ಮಂಗಳಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಕುವೆಂಪು ಅವರ ಸಮಗ್ರ ಸಾಹಿತ್ಯ ಸಂಪುಟಗಳ ಪುಸ್ತಕ ಪ್ರದರ್ಶನ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಡಿ.ಸಿ ಮೋಹನ್ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ ಭಾಗವಹಿಸಿದರು.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಸಂಘಟನೆಯ ಪದಾಧಿಕಾರಿಗಳು ಕುವೆಂಪು ಜಯಂತಿಯನ್ನು ಆಚರಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿದರು.
Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಅವರ 117ರ ಜನ್ಮದಿನಾಚರಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೋಡಿ ರಂಗಪ್ಪ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಕೋಡಿ ರಂಗಪ್ಪ “ಯಾವ ವ್ಯಕ್ತಿ ಎಲ್ಲಿ ಹೋದರು, ದೈವತ್ವದ ದೃಷ್ಟಿಯಿರಿಸಿಕೊಂಡಿರುತ್ತಾನೋ ಆತ ಮಾತ್ರ ವಿಶ್ವಮಾನವನಾಗಲು ಸಾಧ್ಯ. ಅಂತಹ ಸ್ವಭಾವದ ವ್ಯಕ್ತಿ ಕುವೆಂಪು. ಅವರು ಯಾವುದೇ ಜಾತಿಗೆ ಸೇರಿದವರಲ್ಲ ಬದಲಿಗೆ ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕನ್ನು ಕಂಡವರು. ಅನುಭವದೊಂದಿಗೆ ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದು ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದರು. ಕುವೆಂಪು ಅವರು ರಚಿಸಿರುವ ಮಹಾಕಾವ್ಯ ರಾಮಾಯಣ ದರ್ಶನಂ, ನಾಟಕಗಳು, ಭಾಷಣ ಮತ್ತು ಸಾಹಿತ್ಯ ವಿಮರ್ಶೆ, ಜೀವನ ಚರಿತ್ರೆ, ಕಥೆ ಕಾದಂಬರಿಗಳು ಮತ್ತು ಆತ್ಮ ಕಥನ ನೆನಪಿನ ದೋಣಿಯಲ್ಲಿ ಮುಂತಾದವುಗಳನ್ನು ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರು ಓದಿ ಪ್ರತಿಯೊಬ್ಬರು ವಿಶ್ವಮಾನವರಾಗಬೇಕು. ಇಂತಹ ಮಾಹಾನ್ ಚೇತನರನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜನಪದ ಗಾಯಕ ದೇವರಮಳ್ಳೂರು ಮಹೇಶ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಡಾಲ್ಫಿನ್ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಚಂದನ ಅಶೋಕ್, ಮಾಜಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಅಮೃತಕುಮಾರ್, ಡಾಲ್ಪಿನ್ ವಿದ್ಯಾ ಸಂಸ್ಥೆ ಪ್ರಾಂಶುಪಾಲ ಮುನಿಶಾಮಪ್ಪ, ಕಸಾಪ ಮಾಜಿ ಜಿಲ್ಲಾ ಅಧ್ಯಕ್ಷ ಎಸ್.ವಿ.ನಾಗರಾಜರಾವ್, ಜಾನಪದ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ವಿ.ಕೃಷ್ಣ ಪಾಲ್ಗೊಂಡಿದ್ದರು.
Bagepalli : ಚೇಳೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ 117ನೇ ಜನ್ಮ ದಿನಾಚರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.
ಮುಖ್ಯ ಶಿಕ್ಷಕ ಜಿಲಾನ್ ಬಾಷಾ ಮಾತನಾಡಿ, ಶಿಕ್ಷಣ ಮತ್ತು ಸಾಹಿತ್ಯಗಳಲ್ಲಿ ಉತ್ತಮ ಹೆಸರುಗಳಿಸುವ ಮೂಲಕ ಅವರ ಆದರ್ಶ ತತ್ವಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಆಂಜನೇಯರೆಡ್ಡಿ, ರಮಾನಾಯಕ್, ವೆಂಕಟರಾಮಣ ರೆಡ್ಡಿ, ಶಿವಣ್ಣ, ಶಿಕ್ಷಕಿ ಮಂಜುವಾಣಿ, ಕರವೇ ಜಿಲ್ಲಾ ಸಂಚಾಲಕ ಜೆ.ವಿ.ಚಲಪತಿ, ಮಂಡ್ಯಂಪಲ್ಲಿ ಚಂದ್ರ, ಸುಬ್ಬಿರೆಡ್ಡಿ, ಬಾಬಾಜಾನ್ ಪಾಲ್ಗೊಂಡಿದ್ದರು.
Gauribidanur : ಗೌರಿಬಿದನೂರು ನಗರದ ಎಂ.ಜಿ ರಸ್ತೆಯ ಕುವೆಂಪು ವೃತ್ತದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಜಾನಪದ ಪರಿಷತ್ ಪದಾಧಿಕಾರಿಗಳು ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಅವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ಆರ್. ವೀರಣ್ಣ, ವಿ. ರವೀಂದ್ರನಾಥ್, ಕೆ.ವಿ.ಪ್ರಕಾಶ್, ರಾಮಕೃಷ್ಣ, ನಂಜುಂಡಪ್ಪ, ಗಿರಿಧರ್, ಗೌರೀಶ್, ಮನೋಹರ್, ಜನಾರ್ಧನ ಮೂರ್ತಿ, H.L.V.ವೆಂಕಟೇಶ್, ಮಂಜುನಾಥ್, ದಂಡಪಾಲ್, ವಿವೇಕಾನಂದ ರೆಡ್ಡಿ, ನರಸಿಂಹಮೂರ್ತಿ ಉಪಸ್ಥಿತರಿದ್ದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com