Chikkaballapur : ಚಿಕ್ಕಬಳ್ಳಾಪುರ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಕ್ಕಲಮಡಗು ಮುಖ್ಯ ಪೈಪ್ ಲೈನ್ ಹೊಡೆದಿದ್ದು ದುರಸ್ತಿಗೆ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಕಾಲಾವಕಾಶ ಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೈನಂದಿನ ಕುಡಿಯುವ ನೀರಿನ ವ್ಯತ್ಯಯ (Drinking Water) ಉಂಟಾಗುವುದರಿಂದ ಚಿಕ್ಕಬಳ್ಳಾಪುರ ನಗರದ ಸಾರ್ವಜನಿಕ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಜಿ ಮನ್ಸೂರ್ ಆಲಿ ತಿಳಿಸಿದ್ದಾರೆ.