Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇ-ಶ್ರಮ್ (e-Shram) ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಭಾಗವಹಿಸಿದರು.
ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ನೋಂದಣಿ ಮಾಡಿಕೊವುಳ್ಳುವುದರಿಂದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವುದು. ಯೋಜನೆಯ ನೋಂದಣಿ ಕಾರ್ಯ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಕಾರ್ಮಿಕರು ಇ-ಶ್ರಮ್ ಪೋರ್ಟಲ್ ಮೂಲಕ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು. ಇದ್ದರಿಂದ ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದರೆ ₹ 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ ₹ 1 ಲಕ್ಷ ಪರಿಹಾರ ಪಡೆಯಬಹುದು. ಇದರೊಂದಿಗೆ ಉಚಿತ ಆರೋಗ್ಯ ಸೇವೆ, ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಮಕ್ಕಳಿಗೆ ಶೈಕ್ಷಣಿಕ ಸಾಲ, ವಿವಾಹ ಸಹಾಯ ಧನ, ಪಿಂಚಣಿ ಸೌಲಭ್ಯಗಳನ್ನು ಸಹ ಪಡೆಯಬಹುದಾಗಿದೆ ಎಂದು ಅಮರೇಶ್ ರವರು ತಿಳಿಸಿದರು.