Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ, ಚಿಂತಾಮಣಿ ತಾಲ್ಲೂಕಿನ ಊಲವಾಡಿ, ಮಂಚೇನಹಳ್ಳಿ ತಾಲ್ಲೂಕಿನ ಮಂಚೇನಹಳ್ಳಿ, ಚೇಳೂರು ತಾಲ್ಲೂಕಿನ ಏನಿಗದಲೆ, ಶಿಡ್ಲಘಟ್ಟ ತಾಲ್ಲೂಕಿನ ಆನೂರು, ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಳ್ಳಿ, ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಮತ್ತು ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ (Gandhi Grama Puraskar) ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು October 2ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡುವರು.