Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಗುರುವಾರ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಸಭೆಯಲ್ಲಿ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಅವರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಆರ್. ಲತಾ ” ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಜನರ ರಕ್ಷಾ ಕವಚಗಳಾಗಿವೆ. ಕಾರ್ಯಾಂಗದ ಅಡಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ. ಸರ್ಕಾರಿ ನೌಕರರ ಸಂಘವು ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೀಡಿರುವ ಮನವಿಯನ್ನು ಪರಿಶೀಲಿಸಿ ಭವನ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗುವುದು” ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ಇಲಾಖೆಯ ಡಾ.ಯೆಲ್ಲಾ ರಮೇಶ್ ಬಾಬು, ಡಾ.ಅಮಸಾ ವಿಶ್ವನಾಥ್ ರೆಡ್ಡಿ, ಗಣಪತಿಶಾಸ್ತ್ರಿ, ಮೋಹನ್, ಮಂಜುನಾಥ್, ಎನ್. ಲಕ್ಷ್ಮಿಪತಿ, ಡಾ.ಎಂ.ಎಸ್. ಅಂಬಿಕಾ, ಪರಶುರಾಮ್, ವಿನೋದ್, ಕೋಟಮ್ಮ ರಿಗೆ ‘ಸರ್ವೋತ್ತಮ ಸೇವಾ’ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಹರೀಶ್ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ತಹಶೀಲ್ದಾರ್ ಎಸ್. ದ್ವಾರಕೀನಾಥ್ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್, ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್, ಡಿವೈಎಸ್‌ಪಿ ವಾಸುದೇವ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸರ್ಕಾರಿ ನೌಕರರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur