Home News Chikkaballapur Group- B ಹುದ್ದೆಗೆ ನೇಮಕಾತಿ ಪರೀಕ್ಷೆ: ಪೂರ್ವಸಿದ್ಧತಾ ಸಭೆ

Group- B ಹುದ್ದೆಗೆ ನೇಮಕಾತಿ ಪರೀಕ್ಷೆ: ಪೂರ್ವಸಿದ್ಧತಾ ಸಭೆ

0
Chikkaballapur Group- B Examination Preliminary Meeting

Chikkaballapur: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆ (Group- B Examination) (Preliminary Meeting) ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ “ಜನವರಿ 19ರಂದು ಮತ್ತು 25ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಯನ್ನು ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನದಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ 4,499 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಕೊಠಡಿಗಳ ಸ್ವಚ್ಛತೆ, ಗಾಳಿಯ ವ್ಯವಸ್ಥೆ, ಶೌಚಾಲಯ, ಸುಸ್ಥಿಯಲ್ಲಿರುವ ಗಡಿಯಾರ ಸೇರಿದಂತೆ ಸೌಕರ್ಯಗಳ ವ್ಯವಸ್ಥೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ಕರ್ತವ್ಯಕ್ಕೆ ನೇಮಿಸಲ್ಪಟ್ಟ ಸಂಬಂಧಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮೆರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಸುಸ್ಥಿತಿಯ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಸಂವೀಕ್ಷಕರಿಗೆ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಹಾಳೆಗಳು ವಿತರಣೆಯಾಗಿರುವುದನ್ನು ಖಾತರಿ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಲೋಪವಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ನಿಗಾವಹಿಸಿ” ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್ ಭಾಸ್ಕರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ವಿಷಯ ಪರೀವಿಕ್ಷಕ ಜಮೀರ್ ಪಾಷ, ಪ್ರಾಂಶುಪಾಲರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version