Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನದ ಕುರಿತು ಅನೇಕ ಕಡೆ ಜಾಗೃತಿ ಮೂಡಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಹರ್ ಘರ್ ತಿರಂಗಾ ಅಭಿಯಾನದ ಆಶಯದಂತೆ August 13 ರಿಂದ August 15 ವರೆಗೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ (Indian National Flag) ಹರಿಸಲು ಕೋರಿ ಜಿಲ್ಲಾ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಉಚಿತವಾಗಿ ರಾಷ್ಟ್ರಧ್ವಜ ವಿತರಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ (Deputy Commissioner) ಎನ್.ಎಂ.ನಾಗರಾಜ್ ರಾಷ್ಟ್ರಧ್ವಜ ವಿತರಿಸಿದರು.

ಚಿಕ್ಕಬಳ್ಳಾಪುರ ರೋಲರ್ ಸ್ಕೇಟಿಂಗ್ ಫೆಡರೇಷನ್ (Roller Skating Federation) ಸ್ಕೇಟಿಂಗ್ ವಿದ್ಯಾರ್ಥಿಗಳು ನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಕುರಿತು ಸ್ಕೇಟಿಂಗ್ ಮೂಲಕ ಜಾಗೃತಿ ಮೂಡಿಸಿದರು.
ಶಿಡ್ಲಘಟ್ಟ

‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ ಶಿಡ್ಲಘಟ್ಟ ನಗರಸಭೆಯಿಂದ ಗುರುವಾರ ಕಾಲ್ನಡಿಗೆ ಜಾಥ ಹಮ್ಮಿಕೊಳಲಾಗಿತ್ತು.
ಚಿಂತಾಮಣಿ

ಅಮೃತ ಮಹೋತ್ಸವದ ಅಂಗವಾಗಿ ಚಿಂತಾಮಣಿ ನಗರಸಭೆ ವತಿಯಿಂದ ಗುರುವಾರ ನಗರದ ಝಾನ್ಸಿರಾಣಿ ಕ್ರೀಡಾಂಗಣದ ಬಳಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.
ಗುಡಿಬಂಡೆ

ಗುಡಿಬಂಡೆ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
ಬಾಗೇಪಲ್ಲಿ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಾಗೇಪಲ್ಲಿ ತಾಲ್ಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ ನಡೆಯಿತು.