Home News Chikkaballapur ಡಿ. 12 ರಿಂದ ಹೆಲ್ಮೆಟ್ ಕಡ್ಡಾಯ: ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೂ ಹೆಲ್ಮೆಟ್ ಬೇಕು

ಡಿ. 12 ರಿಂದ ಹೆಲ್ಮೆಟ್ ಕಡ್ಡಾಯ: ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೂ ಹೆಲ್ಮೆಟ್ ಬೇಕು

0
Chikkaballapur Helmet Compulsory from Dec 12

Chikkaballapur : ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಅಪಘಾತಗಳು ಮತ್ತು ಪ್ರಾಣ ಹಾನಿಯನ್ನು ತಪ್ಪಿಸುವ ಸಲುವಾಗಿ ಡಿಸೆಂಬರ್ 12 ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿ ಆವರಣ ಪ್ರವೇಶಿಸುವ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ. ನವೀನ್ ಭಟ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಎದುರು ನಡೆದ ಬೀದಿ ನಾಟಕದ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದ ನಂತರ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೂ ನಿಯಮ ಜಾರಿ

  • ಕಚೇರಿ ಪ್ರವೇಶ ನಿರ್ಬಂಧ: ಡಿಸೆಂಬರ್ 12 ರಿಂದ ಹೆಲ್ಮೆಟ್ ಧರಿಸದೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬರುವ ಯಾವುದೇ ದ್ವಿಚಕ್ರ ವಾಹನ ಸವಾರರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸಿಇಒ ಸ್ಪಷ್ಟಪಡಿಸಿದ್ದಾರೆ.
  • ಸಿಬ್ಬಂದಿಗೆ ಸೂಚನೆ: ಜಿಲ್ಲಾಧಿಕಾರಿ ಕಚೇರಿ ಹಾಗೂ ಇತರೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
  • ದಂಡ ಮತ್ತು ಪರಿಶೀಲನೆ: ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಆರಂಭದಲ್ಲಿ ಎರಡು ದಿನಗಳ ಕಾಲ ಅರಿವು ಮೂಡಿಸಲಾಗುವುದು. ಅದರ ನಂತರ ಗೇಟಿನ ಬಳಿ ಪೊಲೀಸ್ ಸಿಬ್ಬಂದಿಯನ್ನು ನೇಮಿಸಿ, ಹೆಲ್ಮೆಟ್ ಮಾತ್ರವಲ್ಲದೆ, ಚಾಲನಾ ಪರವಾನಗಿ (DL) ಮತ್ತು ಇನ್ಶೂರೆನ್ಸ್ ಇಲ್ಲದ ವಾಹನಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗುವುದು ಎಂದು ಡಾ. ನವೀನ್ ಭಟ್ ಎಚ್ಚರಿಸಿದರು.

ಅಪಘಾತ ತಡೆಯಲು ಕ್ರಮ

ಜಿಲ್ಲೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಅಪಘಾತಗಳು ಹೆಚ್ಚಾಗಿ ಪ್ರಾಣ ಹಾನಿಯಾಗುತ್ತಿದೆ. ಇದನ್ನು ತಪ್ಪಿಸಲು ಡಿ.12 ರಿಂದ ಹೆಲ್ಮೆಟ್ ಕಡ್ಡಾಯ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಭಾಸ್ಕರ್ ಅವರು ತಿಳಿಸಿದರು.

ಸಾರ್ವಜನಿಕರು ತಮ್ಮ ಹಿತದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಮತ್ತು ಹೆಲ್ಮೆಟ್ ಧರಿಸಿ ಸುರಕ್ಷಿತವಾಗಿ ಪ್ರಯಾಣಿಸಬೇಕು ಎಂದು ಅವರು ಕೋರಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version