Home News Chikkaballapur ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

0
324
Chikkaballapur Hoysala and Chennamma bravery awards

Chikkaballapur : 2023-24ನೇ ಸಾಲಿನ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ (Hoysala and Chennamma bravery awards) ಆಯ್ಕೆಯಾದ 8 ಮಕ್ಕಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ‌ಎಚ್.ನರಸಿಂಹಯ್ಯ ಸಭಾಂಗಣದಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು.

ನಾವೀನ್ಯ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಅರೂರು ಗ್ರಾಮದ ರಿಷಿ ಪ್ರಯಾಗ್ ಎ.ಎಸ್, ಮಂಚನಬಲೆ ಗ್ರಾಮದ ಎಸ್.ನಿರ್ಮಲ್ ತೇಜ್, ತಾರ್ಕಿಕ ಕ್ಷೇತ್ರದಲ್ಲಿ ಚಿಂತಾಮಣಿ ನಗರದ ಯಾಶಿಕಾ, ಚಿಕ್ಕಬಳ್ಳಾಪುರ ನಗರದ ಮೋಕ್ಷ.ಪಿ.ಎಸ್, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಗೌರಿಬಿದನೂರಿನ ಎಂ.ಎನ್.ರಮ್ಯಾ, ಸಿ.ಎಸ್. ಸುಶ್ಮಿತಶ್ರೀ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಚೀಮನ್ನಗಾರಿಪಲ್ಲಿ ಪಲ್ಲವಿ.ಸಿ.ಎ ಹಾಗೂ ಚಿಕ್ಕಬಳ್ಳಾಪುರ ನಗರದ ಸೈಯದ್ ಶಬಾಜ್ ಅವರಿಗೆ ‍ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಈಶ್ವರಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌.ಐ ಖಾಸಿಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವೆಂಕಟೇಗೌಡ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!