Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ವಿಟಿಯುನ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸೋಮವಾರ ನಡೆದ ‘ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ (International Day Against Drug Abuse and Trafficking) ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಲಾಗಿತ್ತು.
ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ “ಜನರು ಮೊದಲು, ಕಳಂಕ ಮತ್ತು ತಾರತಮ್ಯವನ್ನು ನಿಲ್ಲಿಸಬೇಕು. ಅಕ್ರಮಗಳನ್ನು ತಡೆಗಟ್ಟುವಿಕೆಯನ್ನು ಬಲಪಡಿಸುವುದು’ ಎಂಬ ಘೋಷವಾಕ್ಯದಡಿ ಈ ದಿನಾಚರಣೆ ಆಚರಿಸಲಾಗುತ್ತಿದ್ದು ಮಾದಕ ವಸ್ತುಗಳ ಸೇವನೆಯು ಮನುಷ್ಯನ ಆರೋಗ್ಯದ ಜೊತೆಗೆ ಸಮಾಜ, ದೇಶದ ಅಭಿವೃದ್ಧಿಗೂ ಮಾರಕ” ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎ. ಅರುಣ ಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲಾ ಅಬಕಾರಿ ಅಧಿಕಾರಿ ಕೆ.ಆಶಾಲತಾ, ಡಿ.ವೈ.ಎಸ್.ಪಿ. ವಾಸುದೇವ್, ನಂದಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಎಚ್.ಒ.ಡಿ ಸುರೇಶ್ ನಾಯ್ಕ್, ಜಿಲ್ಲಾ ಶಸ್ತ್ರಚಿಕಿತ್ಸಕ ಪಿ.ವಿ.ರಮೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ ಮುರಳಿ ಮೋಹನ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.