Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ನಗರದ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ಹಾಗೂ ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್ “ಮಹಿಳೆಯರ ಸಬಲೀಕರಣಕ್ಕೆ ಗರವಿಂದ ಗ್ರಾಮ ಮಟ್ಟದಲ್ಲಿ ಸ್ವಸಹಾಯ ಸಂಘಗಳನ್ನು ಚುರುಕಾಗಿ ಬಳಸಬೇಕು ಎಂದರು. ಹತ್ತಿರದ ಗ್ರಾಮಗಳಲ್ಲಿ ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಬಲಪಡಿಸಿ ಆರ್ಥಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರು ಮಾಡಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆಗೊಂಡಿದೆ. ಈ ಸಂದರ್ಭದಲ್ಲಿ ಸಾಧನೆಯೊಂದಿಗೆ ಕಾರ್ಯನಿರ್ವಹಿಸಿದ 6 ಮಹಿಳಾ ಸಾಧಕಿಯರಿಗೆ ಗೌರವವಾಯಿತು. ಇಂತಹ ಗೌರವಗಳು ಹೆಚ್ಚಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಬಸವರಾಜಪ್ಪ, ಜಿಲ್ಲಾ ಕೌಶಲಾಧಿಕಾರಿ ಎಂ.ಪ್ರಸಾದ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ್, ನಗರಸಭೆ ಆಯುಕ್ತ ಮನ್ಸೂರ್ ಅಲಿ, ಡೇ-ನಲ್ಮ್ ಜಿಲ್ಲಾ ವ್ಯವಸ್ಥಾಪಕ ವೆಂಕಟಾಚಲಪತಿ, ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.