Chikkaballapur : ಜನವರಿ 12 ರಂದು ‘ರಾಷ್ಟ್ರೀಯ ಯುವ ದಿನ’ದ (National Youth Day) ಅಂಗವಾಗಿ ಚಿಕ್ಕಬಳ್ಳಾಪುರ ನಗರದ SJCIT ಕಾಲೇಜಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಉದ್ಯೋಗ ಮೇಳ (Job Fair) ಆಯೋಜಿಸಲಾಗಿದೆ. ಮೇಳದಲ್ಲಿ 105ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು 12 ಸಾವಿರಕ್ಕೂ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು ಜಿಲ್ಲಾಡಳಿತ ಉದ್ದೇಶಿಸಿದೆ.
7, 8, 9ನೇ ತರಗತಿ ಉತ್ತೀರ್ಣ, ಎಸ್ಸೆಸ್ಸೆಲ್ಸಿ ಉತ್ತೀರ್ಣ, ಅನುತ್ತೀರ್ಣ, PUC, ITI, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಟೈಲರಿಂಗ್ ಅಥವಾ ಇನ್ನಾವುದೇ ವಿದ್ಯಾರ್ಹತೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ದಾಖಲೆಗಳೊಂದಿಗೆ ಹಾಜರಾಗಿ ಸ್ಥಳದಲ್ಲಿಯೇ ನೋಂದಾಯಿಸಿಕೊಳ್ಳಬಹುದು.
ಅಥವಾ ಮುಂಚಿತವಾಗಿಯೇ https://tinyurl.com/ckbudyogamela, https://chikkaballapur.nic.in ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿ ಅಥವಾ 8861734824 ಗೆ ಸಂಪರ್ಕಿಸಬಹುದು.