Chikkaballapur : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿಗೆ ಎಸ್.ಸಿ.ಎಸ್.ಪಿ (SCSP) ಮತ್ತು ಟಿ.ಎಸ್.ಪಿ (TSP) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ತಲಾ ಒಬ್ಬ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ನಡೆಯಲಿರುವ ಈ ತರಬೇತಿ ಕಾರ್ಯಕ್ರಮಕ್ಕೆ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಭಾಷೆ ಬಳಸುವ ಪ್ರಬುದ್ಧತೆಯನ್ನು ಹೊಂದಿರಬೇಕು.
ಮಾಹಿತಿಗಾಗಿ ಸಂಪರ್ಕ: ಹಿರಿಯ ಸಹಾಯಕ ನಿರ್ದೇಶಕ (9480841224) ಅಥವಾ ವಾರ್ತಾ ಸಹಾಯಕ (9353592472) ಅವರನ್ನು ಸಂಪರ್ಕಿಸಬಹುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷದೊಳಗೆ ಇರಬೇಕು.
ಗೌರವಧನ: ತರಬೇತಿಯ ವೇಳೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 15 ಸಾವಿರ ಗೌರವಧನ ನೀಡಲಾಗುತ್ತದೆ.
ಒಮ್ಮೆ ಈ ಯೋಜನೆಯಡಿ ಫಲಾನುಭವಿಯಾದವರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿಲ್ಲ. ಅರ್ಹ ಅಭ್ಯರ್ಥಿಗಳು ಜಿಲ್ಲೆಯಲ್ಲಿ ದೊರೆಯದಿದ್ದರೆ, ನೆರೆಯ ಜಿಲ್ಲೆಗಳಿಂದಲೂ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ.
ಅರ್ಜಿ ಸಲ್ಲಿಕೆ: ಆಸಕ್ತರು ಡಿಸೆಂಬರ್ 23 ರೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು.
