Chikkabalapur : ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ (Kannada Sahitya Parishat) ಚಟುವಟಿಕೆಗಳಿಗೆ ಅನುಕೂಲ ಆಗುವಂತೆ ಜಿಲ್ಲಾ ಕೇಂದ್ರ ಸೇರಿದಂತೆ 6 ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಭವನ ಕಟ್ಟಡ ನಿರ್ಮಿಸಲು ನಗರದ ಪ್ರಮುಖ ಭಾಗದಲ್ಲಿ 100×100 ವಿಸ್ತೀರ್ಣದ ಸ್ಥಳ ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ಅವರಿಗೆ ಜಿಲ್ಲಾ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಕೇಂದ್ರದಲ್ಲಿ ಸೂಕ್ತ ಸ್ಥಳ ಮಂಜೂರು ಮಾಡಲಾಗುವುದು. ತಾಲ್ಲೂಕುಗಳ ತಹಶೀಲ್ದಾರರಿಗೆ ಕರೆ ಮಾಡಿ ತಾಲ್ಲೂಕು ಕೇಂದ್ರದಲ್ಲಿ ಕಸಾಪಗೆ ಸರ್ಕಾರಿ ಜಾಗ ನೀಡುವಂತೆ ಹೇಳುವುದಾಗಿ ಅವರು ತಿಳಿಸಿದರು.
ಜಿಲ್ಲಾ ಘಟಕ ಕಸಾಪ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ (Prof. Kodi Rangappa) ನೇತೃತ್ವದ ನಿಯೋಗದಲ್ಲಿ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ಕಸಾಪ ತಾಲ್ಲೂಕು ಅಧ್ಯಕ್ಷ ಯಲುಹಳ್ಳಿ ಸೊಣ್ಣೇಗೌಡ, ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್, ನಾಗಭೂಷಣರೆಡ್ಡಿ, ಗ.ನ.ಅಶ್ವತ್ಥ್ ಮತ್ತಿತರರು ಉಪಸ್ಥಿತರಿದ್ದರು.