Friday, March 24, 2023
HomeChikkaballapurಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದಗ್ರಹಣ

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದಗ್ರಹಣ

- Advertisement -
- Advertisement -
- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ (Government Junior College) ಆವರಣದ ನಂದಿ ರಂಗಮಂದಿರದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ ಮತ್ತು ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ ” ಜನರಿಗೆ ಕನ್ನಡ ಸಾಹಿತ್ಯದ ವಿಶಿಷ್ಟ ವಿಚಾರಗಳನ್ನು ಕೊಡಬೇಕು. ಸಾಹಿತ್ಯ ಪರಂಪರೆ ಬೆಳೆಯಬೇಕು ಎನ್ನುವ ಆಶಯದಲ್ಲಿ ಮೈಸೂರು ಮಹಾರಾಜರು ಮತ್ತು ಸರ್‌.ಎಂ.ವಿಶ್ವೇಶ್ವರಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ ಆರಂಭಿಸಿದರು. ಜಾತಿ, ಧರ್ಮಗಳ ನಡುವೆ ಒಡಕು ಉಂಟಾಗುವಂತಹ ಸಂಧರ್ಭದಲ್ಲಿ ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟುವ ಕೆಲಸವಾಗಬೇಕು. ವಿಧ್ಯರ್ಥಿಗಳಲ್ಲಿ ಓದು ವ್ಯಕ್ತಿತ್ವವನ್ನು ಬೆಳೆಸುತ್ತದೆ ಮತ್ತು ಚಿಂತನೆಗಳು ವಿಕಾಸಗೊಳ್ಳಲು ಪುಸ್ತಕಗಳ ಓದು ಸಹಕಾರಿಯಾಗುತ್ತದೆ. ಕೈವಾರ ತಾತಯ್ಯ, ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಮಾನವಧರ್ಮ ಪೀಠದ ಜಚನಿ ಅವರು ಇದ್ದಂತಹ ಚಿಕ್ಕಬಳ್ಳಾಪುರವು ಸಾಹಿತ್ಯ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಜಿಲ್ಲೆ. ಗ್ರಾಮ ಮಟ್ಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯರಾಮರೆಡ್ಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ನಾಗರಾಜರಾವ್, ವೈ.ಎಲ್.ಹನುಮಂತರಾವ್, ವೀರಣ್ಣ, ಕಾಗತಿ ವೆಂಕಟರತ್ನಂ, ಸಾಹಿತಿ ಗೋಪಾಲಗೌಡ ಕಲ್ಪಮಂಜಲಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಂಜಣ್ಣ, ರಾಮಯ್ಯ, ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!