Chikkaballapur : ಶ್ರೀ ವಿಷ್ಣುವಿನ (Vishnu) ದಶಾವತಾರಗಳಲ್ಲಿ ಎಂಟನೇ ಅವತಾರವಾದ ಭಗವಾನ್ ಶ್ರೀಕೃಷ್ಣ (Bhagwan Shri Krishna)ನ ಜನ್ಮಾಷ್ಟಮಿಯನ್ನು (Krishna Janmashtami) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬಹುತೇಕ ಎಲ್ಲಾ ಶಾಲೆಗಳಲ್ಲಿ ಪುಟಾಣಿಗಳು ಕೃಷ್ಣ ಹಾಗೂ ರಾಧೇಯರ (Radha) ವೇಷತೊಟ್ಟು (Fancy Dress) ಕೃಷ್ಣನ ಲೀಲೆಗಳನ್ನು ಸ್ಮರಿಸಿದರು.
ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ನಗರದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಯಾದವ ಸಮುದಾಯದ ಸಹಕಾರದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K SUdhakar)”ಶೀಘ್ರವೇ ಶ್ರೀಕೃಷ್ಣ ಭವನಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು” ಎಂದು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ (Muddenahalli) ಸತ್ಯಸಾಯಿ ಗ್ರಾಮದ ಸತ್ಯ ಸಾಯಿ ಲೋಕ ಸೇವಾ ಗುರುಕುಲದ ಆಶ್ರಯದಲ್ಲಿ ಕೃಷ್ಣಜನ್ಮಾಷ್ಟಮಿಯನ್ನು ಕೃಷ್ಣನ ಬಾಲ್ಯವನ್ನು ನೆನಪಿಸುವ ಮೊಸರು ಕುಡಿಕೆ, ಬಣ್ಣದ ಓಕುಳಿಯಾಟ, ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷಭೂಷಣ, ಯಶೋಧೆ–ಕೃಷ್ಣನ (Yashoda Krishna) ಪ್ರಾತ್ಯಕ್ಷಿಕೆ ಪ್ರದರ್ಶನದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು.
ಗೌರಿಬಿದನೂರು
ಗೌರಿಬಿದನೂರು (Gauribidanur) ನಗರದ ಶ್ರೀದೇವರಾಜು ಅರಸು ಭವನದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ವತಿದಿಂದ ಶ್ರೀಕೃಷ್ಣ ಜಯಂತಿ ಕಾಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ (N H Shivaskankar Reddy) “ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರ ಮೀಸಲಿಟ್ಟ ಸ್ಥಳದಲ್ಲಿ ಭವ್ಯ ಭವನಕ್ಕೆ ₹10 ಲಕ್ಷ ನೀಡಿದ್ದೇನೆ” ಎಂದು ತಿಳಿಸಿದರು.
ಶಿಡ್ಲಘಟ್ಟ
ಶಿಡ್ಲಘಟ್ಟ (Sidlaghatta) ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಡ್ಲಘಟ್ಟ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರು ಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ಶುಕ್ರವಾರ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.