Chikkaballapur : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ (Lokasabha Election) ನಾಮಪತ್ರ (Nomination) ಸಲ್ಲಿಸಲು ನಾಲ್ಕನೇ ದಿನವಾದ ಗುರುವಾರ ಆರು ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದಿಂದ ಎನ್. ಕಲಾವತಿ, ಬಹುಜನ ಸಮಾಜ ಪಕ್ಷದಿಂದ ಪಿ. ಮಹದೇವ್, ಪಕ್ಷೇತರ ಅಭ್ಯರ್ಥಿಗಳಾಗಿ ಎಚ್.ಸಿ.ಚಂದ್ರಶೇಖರ್, ರಮೇಶ್, ಜಿ.ಎನ್. ರವಿ, ರಾಮನಾಯ್ಕ ನಾಮಪತ್ರ ಸಲ್ಲಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ https://affidavit.eci.gov.in ಪೋರ್ಟಲ್‌ನಲ್ಲಿ ಆಪ್‌ಲೋಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.