Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಲೋಕಸಭಾ ಸಾರ್ವತ್ರಿಕ ಚುನಾವಣಾ (Lokasabha Election) ಪೂರ್ವ ಸಿದ್ಧತಾ ಸಭೆ (Preparatory meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಶೀಘ್ರದಲ್ಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲಿದ್ದು ಅಗತ್ಯ ಪೂರ್ವ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕು. ಚುನಾವಣೆಗೆ ಅಗತ್ಯವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿವರವನ್ನು ಎಚ್‌ಆರ್‌ಎಂಎಸ್ ತಂತ್ರಾಂಶದಿಂದ ತೆಗೆದುಕೊಳ್ಳಬೇಕು. ಎಷ್ಟು ಸಿಬ್ಬಂದಿ, ಅಧಿಕಾರಿಗಳ ಅಗತ್ಯತೆ ಇದೆ ಎಂಬುದನ್ನು ತಾಲ್ಲೂಕುವಾರು ಮಾಹಿತಿಯನ್ನು ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕೂಡಲೇ ಜನಪ್ರತಿನಿಧಿಗಳು ಇರುವ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ನಿಗದಿತ ಕಾಲಮಿತಿಯ ಒಳಗೆ ಕ್ರಮ ಕೈಗೊಳ್ಳಬೇಕು. ಚುನಾವಣಾ ಕರ್ತವ್ಯಗಳ ವಿಡಿಯೊ ಚಿತ್ರೀಕರಣ ಮತ್ತು ಇತರ ಡಿಜಿಟಲ್ ದಾಖಲೆಗಳ ಸಂಗ್ರಹಣೆಗೆ ಅಗತ್ಯ ಕ್ರಮವಹಿಸಬೇಕು” ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ಭಾಸ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.