Home News Chikkaballapur ಡಾ.ಕೆ.ಸುಧಾಕರ್, ಎಚ್.ಡಿ.ಕುಮಾರಸ್ವಾಮಿ ಬೃಹತ್ Road Show

ಡಾ.ಕೆ.ಸುಧಾಕರ್, ಎಚ್.ಡಿ.ಕುಮಾರಸ್ವಾಮಿ ಬೃಹತ್ Road Show

0
Chikkaballapur Lokasabha Sudhakar HD Kumarswamy Road Show

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ (K Sudhakar) ಮತ್ತು ಎಚ್‌.ಡಿ.ಕುಮಾರಸ್ವಾಮಿ (H D Kuamrswamy) ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಷೊ (Road Show) ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ “‘ಡಾ.ಕೆ.ಸುಧಾಕರ್ ಅವರಿಗೆ ಸಂಸದರಾಗುವ ಅರ್ಹತೆ ಇದ್ದು ಅವರ ವಿರುದ್ಧ ಅಪಪ್ರಚಾರ ಸಹ ಮಾಡಲಾಗುತ್ತಿದೆ. ಅಭಿವೃದ್ಧಿಗಾಗಿ ಅವರು ಗೆಲ್ಲಬೇಕು . ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ. ಕಾಂಗ್ರೆಸ್ ಬೆಂಬಲ ನೀಡಿದಾಗ ಅವರ ಎಲ್ಲ ಕಾರ್ಯಕ್ರಮಗಳನ್ನು ಮುಂದುವರಿಸಿದೆ. ರೈತರ ಸಾಲ ಮನ್ನಾ ಮಾಡಿದೆ. ಆಗ ಸಾಲ ಮನ್ನಾ ಮಾಡಿದ್ದೇನೆ ಹಣ ಕೊಡಿ ಎಂದು ಕೇಂದ್ರ ಸರ್ಕಾರದ ಮುಂದೆ ಹೋಗಲಿಲ್ಲ. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಹೊರತುಪಡಿಸಿ ಯಾವುದೇ ಅಭಿವೃದ್ದಿ ಇಲ್ಲ” ಎಂದು ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ರೋಡ್ ಷೊನಲ್ಲಿ ಮಾಜಿ ಸಚಿವರಾದ ಎಂ.ಟಿ.ಬಿ ನಾಗರಾಜ್, ಬೈರತಿ ಬಸವರಾಜು, ಶಾಸಕರಾದ ಧೀರಜ್ ಮುನಿರಾಜು, ಜಿ.ಟಿ.ದೇವೇಗೌಡ, ಮಾಜಿ ಶಾಸಕರಾದ ನಿಸರ್ಗ ನಾರಾಯಣ ಸ್ವಾಮಿ, ಪಿಳ್ಳ ಮುನಿಶಾಮಪ್ಪ, ಡಾ.ಶ್ರೀನಿವಾಸ್ ಮೂರ್ತಿ, ನಾಗರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ‌ಮುನೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ರಾಜ್ಯ ಕಾರ್ಯದರ್ಶಿ ಮುನಿರಾಜು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಭಾಗಿಯಾದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version