Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ (Deputy Commissioner Office) ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ (Madivala Machideva Jayanthi) ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮಾತಾನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿಗಳು ” ಸರಳವಾಗಿ ವಚನಗಳನ್ನು ರಚಿಸುವ ಮೂಲಕ ಸಾಮಾಜಿಕ ಸುಧಾರಣೆಗೆ ಮಡಿವಾಳ ಮಾಚಿದೇವ ಅವರು ನಾಂದಿಯಾಡಿ ಕಾಯಕನಿಷ್ಠೆ, ಕೆಲಸದ ಮೇಲೆ ಶ್ರದ್ಧೆ ಬಿಂಬಿಸುವ ವಚನಗಳನ್ನು ರಚಿಸಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಚಳವಳಿಗಳ ಮೂಲಕ ಜನರಲ್ಲಿ ಅರಿವು ಮೂಡಿಸಿ ಸಮಾಜದ ಏಳಿಗೆಗಾಗಿ ಶ್ರಮಿಸಿದ ಇಂತಹ ವಚನಕಾರರನ್ನು ನೆನೆಯಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಪದ್ಮಾವತಿ, ಮಡಿವಾಳ ಮಾಚಿದೇವ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಪದಾಧಿಕಾರಿಗಳಾದ ಆರ್.ರಾಜಶೇಖರ್, ಮುನಿನಾರಾಯಣಪ್ಪ ಹಾಗೂ ಮಡಿವಾಳ ಸಮುದಾಯದ ಮುಖಂಡರು ಭಾಗವಹಿಸಿದರು.
ಚಿಂತಾಮಣಿ
Chintamani : ಚಿಂತಾಮಣಿ ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹನುಮಂತರಾಯಪ್ಪ ಭಾಗವಹಿಸಿದರು.
ಬಾಗೇಪಲ್ಲಿ
Bagepalli : ಬಾಗೇಪಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವೈ.ರವಿ ಉಪಸ್ಥಿತರಿದ್ದರು.
ಶಿಡ್ಲಘಟ್ಟ
Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ (Taluk Office) ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಮಂಗಳವಾರ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿ (Madivala Machideva Jayanthi) ಆಚರಣೆ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur