Chikkaballapur : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2025ರ ಜನವರಿ 7ರಿಂದ 9ರ ತನಕ “Exploring Nature’s Pharmacy: Potential of Medicinal and Aromatic Plants and Their Conservation” ವಿಷಯದ ಮೇಲೆ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.
ಸಮ್ಮೇಳನದಲ್ಲಿ ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ Research paper ಮಂಡನೆ ಮಾಡಲು ಅವಕಾಶ ನೀಡಲಾಗಿದ್ದು, ಆಯ್ಕೆಯಾದ ಸಂಶೋಧನೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ.
ಆಸಕ್ತರು ಡಿಸೆಂಬರ್ 31ರೊಳಗೆ Google Form (https://forms.gle/jochVVLYyNBHKtdx7) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳನ್ನು 9845258894 ಅಥವಾ 9880405181 ಸಂಖ್ಯೆಗೆ ಸಂಪರ್ಕಿಸಬಹುದು. ಅಲ್ಲದೆ, ಅಕಾಡೆಮಿಯ ವೆಬ್‌ಸೈಟ್ (https://kstacademy.in) ವೀಕ್ಷಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ. ರಮೇಶ್ ತಿಳಿಸಿದ್ದಾರೆ.