ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

- Advertisement -
- Advertisement -

ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ-2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದ್ದಾರೆ.

Quick facts: Helpline centers have opened district and taluk-wide for the 2026 Karnataka Legislative Council South-East Graduates’ Constituency election; Chikkaballapur district has 25,584 registered graduate voters (14,597 men, 10,987 women).

ಚುನಾವಣೆಯಲ್ಲಿ ಎಷ್ಟು ಜಿಲ್ಲೆಗಳು ಸೇರಿವೆ?

ಚುನಾವಣಾ ವೇಳಾಪಟ್ಟಿಯ ಅಧಿಸೂಚನೆ ಸೆಪ್ಟೆಂಬರ್ 29 ರಂದು ಪ್ರಕಟವಾಗಲಿದ್ದು, ಚಿಕ್ಕಬಳ್ಳಾಪುರ ಸೇರಿದಂತೆ ಐದು ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಮತದಾರರು ನೋಂದಾಯಿಸಿಕೊಂಡಿದ್ದು, ಈ ಪೈಕಿ 14,597 ಪುರುಷರು ಹಾಗೂ 10,987 ಮಹಿಳಾ ಮತದಾರರಿದ್ದಾರೆ. ಅರ್ಹ ಪದವೀಧರರು ಸೆಪ್ಟೆಂಬರ್ 29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಚುನಾವಣಾ ವೇಳಾಪಟ್ಟಿ ಏನಿದೆ?

ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 9 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 23 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತಗಳ ಎಣಿಕೆ ನಡೆಯಲಿದೆ. ಅಕ್ಟೋಬರ್ 31ರೊಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ 15 ಫ್ಲೈಯಿಂಗ್ ಸ್ಕ್ವಾಡ್‌ಗಳು, 8 ವಿಡಿಯೋ ಸರ್ವೇಲೆನ್ಸ್ ತಂಡಗಳು ಹಾಗೂ 8 ಸೆಕ್ಟರ್ ಅಧಿಕಾರಿಗಳ ತಂಡಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ತಾಲ್ಲೂಕುವಾರು ಸಹಾಯವಾಣಿ ಸಂಖ್ಯೆಗಳು ಯಾವುವು?

ಜಿಲ್ಲಾಧಿಕಾರಿಗಳ ಕಚೇರಿ – 08156-277002, ಚಿಕ್ಕಬಳ್ಳಾಪುರ ತಾಲ್ಲೂಕು – 08156-272564, ಗೌರಿಬಿದನೂರು – 08155-286451, ಮಂಚೇನಹಳ್ಳಿ – 9535958765, ಗುಡಿಬಂಡೆ – 08156-271250, ಬಾಗೇಪಲ್ಲಿ – 08150-200127, ಚೇಲೂರು – 9945250817, ಶಿಡ್ಲಘಟ್ಟ – 08158-256763 ಹಾಗೂ ಚಿಂತಾಮಣಿ – 08154-252164 ಸಹಾಯವಾಣಿ ಸಂಖ್ಯೆಗಳಲ್ಲಿ ಮತದಾರರು ಮಾಹಿತಿ ಪಡೆಯಬಹುದು. ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪ್ರತಿನಿಧಿಗಳ ಸಭೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)

How many registered graduate voters does Chikkaballapur district have?
The district has 25,584 registered graduate voters — 14,597 men and 10,987 women — for the South-East Graduates’ Constituency election.
When is polling for the MLC graduate constituency election?
Polling is scheduled for October 23 from 8 am to 4 pm, with counting on October 27 and the process concluding by October 31.
Where can voters get election-related help in Chikkaballapur?
Helpline centers are open at the DC’s office and in all taluks, including Chikkaballapur town (08156-272564) and the DC office (08156-277002).

Stay tuned for more local updates.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!