Chikkaballapur :ವಿಶ್ವ ಪ್ರವಾಸೋದ್ಯಮ ದಿನದ (World Tourism Day) ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಜಿಲ್ಲೆಯನ್ನು “ಹಸಿರು-ಸ್ವಚ್ಛ” (Green-Clean) ಮತ್ತು “Plastic Free” ಮಾಡುವ ಪಣ ತೊಡುವ ಮೂಲಕ ಪರಿಸರ ಸುಸ್ಥಿರತೆಯತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ನಾಗರಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ.ಯಶವಂತ್ ಕುಮಾರ್ ಕೋರಿದ್ದಾರೆ.
‘ಸ್ವಚ್ಛತಾ ಹೀ ಸೇವಾ’ ಘೋಷಣೆಯೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಂದಿ ಗಿರಿಧಾಮದಲ್ಲಿ (Nandi Hills) ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಿ ಮಾತನಾಡಿದ ಯಶವಂತ್‌ಕುಮಾರ್, ಸ್ವಚ್ಛತಾ ಜಾಗೃತಿಯ ಮಹತ್ವವನ್ನು ಒತ್ತಿ ಹೇಳಿದರು.
ಆಚರಣೆಯ ಅಂಗವಾಗಿ, ನಂದಿ ಗಿರಿಧಾಮದಂತಹ ಪ್ರಮುಖ ಸ್ಥಳಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳುವ ಬಗ್ಗೆ ಪ್ರವಾಸಿಗರಿಗೆ ತಿಳಿಸಲು ‘ಸ್ವಚ್ಛತಾ ಹೀ ಸೇವಾ ಪಕ್ಷಿಕಾ’ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
Nandi Hills ನಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರವಾಸಿಗರಿಗೆ ಮನವಿ
ಯಶವಂತ್ ಕುಮಾರ್ ಅವರು ಪ್ರವಾಸಿಗರು ಕರ್ನಾಟಕದ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ನಂದಿ ಬೆಟ್ಟದಲ್ಲಿ ನಿಯಮಗಳನ್ನು ಪಾಲಿಸುವಂತೆ ಮತ್ತು ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಹೇಳಿದರು. ಅಪಘಾತಗಳನ್ನು ತಡೆಗಟ್ಟಲು ಮತ್ತು ಪ್ರದೇಶದ ನೈಸರ್ಗಿಕ ಸೌಂದರ್ಯವನ್ನು ಕಾಪಾಡಿಕೊಳ್ಳಲು ಜಾಗರೂಕತೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.
Plastic Free ಅಭಿಯಾನಕ್ಕೆ ಚಾಲನೆ
ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಈಶ್ವರಪ್ಪ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ನಂದಿ ಗಿರಿಧಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿ, ಪ್ರವಾಸಿಗರು, ಸ್ಥಳೀಯರು, ಜಿಲ್ಲಾಡಳಿತ ಚಿಕ್ಕಬಳ್ಳಾಪುರವನ್ನು ಸ್ವಚ್ಛ ಹಾಗೂ ಹಸಿರಿನಿಂದ ಕೂಡಿಸಲು ಸಹಕರಿಸಬೇಕು ಎಂದು ಕರೆ ನೀಡಿದರು.
ಕಲೆ ಮತ್ತು ಜಾಗೃತಿ
ವಿಶ್ವ ಪ್ರವಾಸೋದ್ಯಮ ದಿನದ ಥೀಮ್‌ನ ‘ಪ್ರವಾಸೋದ್ಯಮ ಮತ್ತು ಶಾಂತಿ’ಗೆ ಹೊಂದಿಕೊಂಡು ಸ್ವಚ್ಛತೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಕಲಾ ತಂಡಗಳು ಪ್ರದರ್ಶನ ನೀಡಿದವು.
ಕಾರ್ಯಕ್ರಮದಲ್ಲಿ ಸ್ವಚ್ಛತಾ ಪ್ರತಿಜ್ಞೆ (ಪ್ರತಿಜ್ಞಾವಿಧಿ) ಯನ್ನು ಬೋಧಿಸಲಾಯಿತು ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪೌರಾಯುಕ್ತರು ಮತ್ತು ಬಿಜಿಎಸ್‌ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗಿಯಾದರು.