Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ (National Girl Child Day) ಅಂಗವಾಗಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ‘ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕಾರ್ಯವಿಧಾನ’ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ R. ಲತಾ (Deputy Commissioner R. Latha) “ಕೆಲವು ಕುಟುಂಬಗಳಲ್ಲಿರುವ ಲಿಂಗ ತಾರತಮ್ಯದಿಂದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ವಿಫಲ ಆಗುತ್ತಿದ್ದು ಕೆಲವು ರಂಗಗಳಲ್ಲಿ ಸಾಧನೆ ತೋರುವ ಶಕ್ತಿ ಇದ್ದರೂ ಅವಕಾಶ ವಂಚಿತರಾಗುತ್ತಿದ್ದಾರೆ. ಪೋಷಕರು ಹೆಣ್ಣು ಮಕ್ಕಳಿಗೆ ಕಟ್ಟುಪಾಡು ಹಾಗೂ ನಿಬಂಧನೆ ವಿಧಿಸದೆ ಅವರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಮಹಿಳೆಯರು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಹಾಗೂ ಕೌಟುಂಬಿಕ ಜವಾಬ್ದಾರಿ ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಅವರನ್ನು ಸಬಲೀಕರಣರಾಗಲು ಆತ್ಮಸ್ಥೈರ್ಯ ತುಂಬಬೇಕು” ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನ್ಯಾಯಾಧೀಶರಾದ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಂ.ಧನುರೇಣುಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಸಮಿತಿ ಅಧ್ಯಕ್ಷ ರಾಮರಾಜು, ವಕೀಲರಾದ ಪ್ರಕಾಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur