Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ (Zilla Panchayat) ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮತದಾನ ದಿನಾಚರಣೆ (National Voters’ Day) ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಆರ್. ಲತಾ (Deputy Commissioner R. Latha) ವಹಿಸಿ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ “ಸಂವಿಧಾನ ಬದ್ಧ ಹಕ್ಕಾಗಿರುವ ಮತದಾನ ಹಬ್ಬ ಇದ್ದಂತೆ. ಇತ್ತೀಚೆಗೆ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಮತದಾನ ಆಗುತ್ತಿದ್ದು ಪ್ರತಿಯೊಬ್ಬರೂ ತನ್ನ ಹಕ್ಕಿನ ಜವಾಬ್ದಾರಿ ನಿಭಾಯಿಸುವ ಮನೋಭಾವ ಬೆಳೆಸಿಕೊಂಡು ಹೊಣೆಗಾರಿಕೆ ಅರಿತಾಗ ಮಾತ್ರ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯ. ವಿದ್ಯಾವಂತರು ಮತದಾನದ ಹಕ್ಕು ಹಾಗೂ ಮಹತ್ವವನ್ನು ಇತರರಿಗೆ ತಿಳಿಸಬೇಕು. ಅರ್ಹರು ವೋಟರ್ ಹೆಲ್ಪ್‌ಲೈನ್ ಮೊಬೈಲ್ ಆ್ಯಪ್ ಮೂಲಕ ನೋಂದಣಿಯಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಆಗಬಹುದು. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮತದಾರರ ಸಾಕ್ಷರತಾ ಸಂಘದ (ELC) ಮೂಲಕ ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಪ್ರಕ್ರಿಯೆ, ಉಪಯೋಗ, ಚುನಾವಣಾ ಪಾಲ್ಗೊಳ್ಳುವಿಕೆ ಹಾಗೂ ಹಕ್ಕನ್ನು ಚಲಾಯಿಸುವ ಕುರಿತು ಅರಿವು ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ, ಉಪ ವಿಭಾಗಾಧಿಕಾರಿ ಜಿ. ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur