Home Chikkaballapur ಜಿಲ್ಲೆಯಾದ್ಯಂತ ರಾಷ್ಟ್ರೀಯ ಯುವ ದಿನಾಚರಣೆ

ಜಿಲ್ಲೆಯಾದ್ಯಂತ ರಾಷ್ಟ್ರೀಯ ಯುವ ದಿನಾಚರಣೆ

0

Chikkaballapur District : ಜಿಲ್ಲೆಯಾದ್ಯಂತ ರಾಷ್ಟ್ರೀಯ ಯುವ ದಿನವನ್ನು (National Youth Day) ಸರಳವಾಗಿ ಆಚರಿಸಲಾಯಿತು. ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದರ (Swami Vivekananda) ಜನ್ಮಜಯಂತಿಯನ್ನು ರಾಷ್ಟ್ರೀಯ ಯುವ ದಿನವಾಗಿ ಜನವರಿ 12 ರಂದು ಆಚರಿಸಲಾಗುತ್ತದೆ.

ಚಿಕ್ಕಬಳ್ಳಾಪುರ

Chikkaballapur : ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ (Sir M.V. Indoor Stadium, Chikkaballapur) ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರವರ ಜನ್ಮದಿನಾಚರಣೆಯ (Vivekananda Jayanti) ಅಂಗವಾಗಿ ಏರ್ಪಡಿಸಿದ್ದ ‘ರಾಷ್ಟ್ರೀಯ ಯುವ ದಿನಾಚರಣೆಯ ಸಮಾರಂಭ’ (National Youth Day) ಮತ್ತು ‘ರಕ್ತದಾನ ಶಿಬಿರ’ (Blood Donation Camp) ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ” ಚಿಕಾಗೋ ಸರ್ವಧರ್ಮ ಸಮ್ಮೇಳನದ ಮೂಲಕ ಭಾರತದ ವೈಶಿಷ್ಟ್ಯ ಮತ್ತು ಸಂಸ್ಕೃತಿಯನ್ನು ಇಡೀ ಪ್ರಪಂಚಕ್ಕೆ ಪಸರಿಸಿದ್ದ ಸ್ವಾಮಿ ವಿವೇಕಾನಂದರು ಎಲ್ಲಾ ಧರ್ಮ ಗ್ರಂಥಗಳನ್ನು ಅಧ್ಯಯನ ಮಾಡಿ ಜಾತಿ, ಧರ್ಮ, ಬಡತನ ನಿರ್ಮೂಲನೆ ಕುರಿತು ಹೆಚ್ಚು ಚಿಂತನೆ ನಡೆಸಿ ನವಭಾರತ ನಿರ್ಮಾಣಕ್ಕೆ ಅಪಾರವಾದ ಕೊಡುಗೆ ನೀಡಿದ್ದರು. ಸ್ವಾಮಿ ವಿವೇಕಾನಂದರ ಭಾಷಣ, ಪತ್ರಗಳು ಹಾಗೂ ಬೋಧನೆಗಳೊಳಗೊಂಡ ಗ್ರಂಥಗಳನ್ನು ಯುವಕರು ಅಧ್ಯಯನ ಮಾಡಿ ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಕ್ತದಾನದಿಂದ ಕ್ಯಾನ್ಸರ್, ಹೃದಯ ಸಂಬಂಧಿತ ಕಾಯಿಲೆಗಳಿಂದ ನಮ್ಮ ಆರೋಗ್ಯ ಸುಧಾರಣೆಯಾಗುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದು ಯುವಕರು ರಕ್ತದಾನ ಮಾಡಿ ಉತ್ತಮ ಆರೋಗ್ಯವಂತರಾಗುವ ಮೂಲಕ ಸಮಾಜ ಸೇವೆ ಮಾಡಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮೀಕಾಂತ ಜೆ. ಮಿಸ್ಕಿನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೋಡಿರಂಗಪ್ಪ, ದಿ ಗೋಲ್ಡನ್ ಗ್ಲೀಮ್ಸ್ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸಿ.ಎಂ.ಮುನಿಕೃಷ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಿಂತಾಮಣಿ

Chintamani : ಚಿಂತಾಮಣಿ ತಾಲ್ಲೂಕಿನ ದೊಡ್ಡಗಂಜೂರು (Doddaganjur) ಗ್ರಾಮದಲ್ಲಿ ಯುವಕರು ಸಸಿ ನೆಡುವ ಮೂಲಕ ವಿವೇಕಾನಂದ ಜನ್ಮ ದಿನಾಚರಣೆ (Vivekananda Jayanti) ಆಚರಿಸಿದರು.

ಚಿಂತಾಮಣಿ ನಗರದ ಹೊರವಲಯದ ಆರ್.ಕೆ.ವಿಷನ್ ಶಾಲೆಯಲ್ಲಿ (R.K. Vision School) ಬುಧವಾರ ರಾಷ್ಟ್ರೀಯ ಯುವ ದಿನೋತ್ಸವವನ್ನು (National Youth Day) ಗಿಡ ನಡೆವುದರ ಮೂಲಕ ಆಚರಿಸಲಾಯಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಶಿಕ್ಷಕ ಎಂ.ಸತ್ಯಮೂರ್ತಿ ಅಮೆರಿಕದ ಷಿಕಾಗೋದ ಭಾಷಣದಲ್ಲಿ ಭಾರತೀಯ ಸನಾತನ ಧರ್ಮದ ಸಾರಾಂಶವನ್ನು ಮಂಡಿಸಿ ವಿಶ್ವದಾದ್ಯಂತ ಎಲ್ಲಾ ದೇಶಗಳು ಭಾರತಿಯ ಸಂಸ್ಕೃತಿಯ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾನ್ ವಿಶ್ವಚೇತನ ವಿವೇಕಾನಂದ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೆಂಕಟೇಶಪ್ಪ , ಗಾಯಿತ್ರಿ, ಸುಮತಿ, ಕಲ್ಪನ, ಮಲ್ಲಿಕಾರ್ಜುನ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘವು ಬುಧವಾರ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ (Vivekananda Jayanti) ಅಂಗವಾಗಿ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು-ನೆರವು ಆನ್‌ಲೈನ್ ಕಾರ್ಯಕ್ರಮವನ್ನು ಜೆ.ಎಂ.ಎಫ್.ಸಿ ನ್ಯಾಯಾ ಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ.ಶಿವಕುಮಾರ್ ಉದ್ಘಾಟಿಸಿದರು.

ಗೌರಿಬಿದನೂರು

Gauribidanur : ಗೌರಿಬಿದನೂರು ನಗರದ ಎಸ್‍ ಎಸ್‍ ಇ ಎ ಕಾಲೇಜು ಆವರಣದಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ತಾಲ್ಲೂಕು ಆಡಳಿತ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಯುವಕರ ದಿನ’ (National Youth Day) ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ನ್ಯಾಯಾಧೀಶೆ ರೇಣುಕಾ ದೇವಿದಾಸ್ ರಾಯ್ಕರ್ ಉದ್ಘಾಟಿಸಿದರು.

ನಂತರ ಮಾತನಾಡಿದ ರೇಣುಕಾ ದೇವಿದಾಸ್ ರಾಯ್ಕರ್ “ಯುವಕರು ವಿವೇಕಾನಂದರ ಆದರ್ಶಗಳು‌ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ದಾರಿ ದೀಪವಾಗಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ನಕಾರತ್ಮಕ ಚಿಂತನೆಗಳು ಹೆಚ್ಚಾಗಿದ್ದು, ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗಿ ದೇಶದಲ್ಲಿ ಅರಾಜಕತೆ ಉಂಟಾಗುತ್ತಿರುವುದು ವಿಷಾದನೀಯ” ಎಂದು ಹೇಳಿದರು.

ಹಿರಿಯ ವಕೀಲ ವಿ.ಗೋಪಾಲ್, ವಕೀಲ ಸಂಘದ ಕಾರ್ಯದರ್ಶಿ ದಯಾನಂದ್, ಪ್ರಾಂಶುಪಾಲರಾದ ಜಿ.ವಿ.ಶ್ರೀನಿವಾಸ್, ಕಾಲೇಜಿನ ಎನ್ ಎಸ್‍ ಎಸ್ ಕಾರ್ಯಕ್ರಮ ಅಧಿಕಾರಿ ಕೆ.ಎನ್.ಶ್ರೀನಿವಾಸಯ್ಯ, ಪ್ರೌಡಶಾಲೆಯ ಉಪಪ್ರಾಂಶುಪಾಲರಾದ ಇಸಾಫುಲ್ಲಾ ಮತಿತ್ತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬಾಗೇಪಲ್ಲಿ

Bagepalli : ಬಾಗೇಪಲ್ಲಿ ತಾಲ್ಲೂಕು ಚೇಳೂರಿನ (Chelur) ಬೆಲ್ಲಾಲಂಪಲ್ಲಿ ಸರ್ಕಾರಿ ಶಾಲೆಯಲ್ಲಿ (Bellalampalli Government School) ಸ್ವಾಮಿ ವಿವೇಕಾನಂದರ ಜಯಂತಿಯನ್ನು (Vivekananda Jayanti) ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಆಚರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬೆಲ್ಲಾಲಂಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎನ್. ಶಶಿಕಲಾ ” ವಿವೇಕಾನಂದರ ಚಿಂತನೆ, ಸಂದೇಶಗಳು ಯುವಕರಲ್ಲಿ ಪ್ರತಿ ದಿನ ಉತ್ತೇಜನ ನೀಡುತ್ತವೆ. ಜೀವನದಲ್ಲಿ ಗುರಿಯಿಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವ ಸಮುದಾಯ ತಮಗೆ ಎದುರಾದ ಸಂಕಷ್ಟಗಳಿಗೆ, ಎಡರು-ತೊಡರುಗಳಿಗೆ ಬೆದರದೆ ‘ಧೈರ್ಯಂ ಸರ್ವತ್ರ ಸಾಧನಂ’ ಎಂದರಿತು ಗುರಿ ತಲುಪಬೇಕು” ಎಂದು ಹೇಳಿದರು.

ಶಿಕ್ಷಕಿ ಶ್ಯಾಮಲ, ಸಿಬ್ಬಂದಿ ಸುನಿತ ಹಾಗೂ ‌ಪೋಷಕರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version