Chikkaballapur : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (Sir M Vishweshwaraiah Stadium, Chikkaballapur) ನಗರಸಭೆ ಹಾಗೂ ಜಿಲ್ಲಾಡಳಿತದ ವತಿಯಿಂದದಿಂದ ಹಮ್ಮಿಕೊಳ್ಳಲಾಗಿದ್ದ ಕ್ಲೀನ್ ಇಂಡಿಯಾ ಸ್ವಚ್ಛ ಭಾರತ್ ವಿಶೇಷ ಅಭಿಯಾನ (Clean India Swachh Bharat Mission ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು.
ಅಮೃತ ಮಹೋತ್ಸವದ ಪ‍್ರಯುಕ್ತ ಜಿಲ್ಲೆಯಲ್ಲಿ ಗ್ರಾಮ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದೆ. ಪೊಲೀಸರ ಇಲಾಖೆ ಈ ಕಾರ್ಯಕ್ರಮಗಳಿಗೆ ಸಹಕಾರ ನೀಡಲಿದೆ. ಸಾರ್ವಜನಿಕರೂ ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುರೇಣುಕಾ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.